ಆ.16ರಂದು ಗುಂಡ್ಲುಪೇಟೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

Published on

ಚಾಮರಾಜನಗರ: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮವು ಗುಂಡ್ಲುಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಆ.16ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಂಗಳ, ಶಿವಪುರ, ಕಲ್ಲಿಗೌಡನಹಳ್ಳಿ ಎನ್.ಜೆ.ವೈ, ಎಲಚಟ್ಟಿ, ಗೋಪಾಲಪುರ ಎನ್.ಜೆ.ವೈ, ದೇವರಹಳ್ಳಿ, ಹೊನ್ನೆಗೌಡನಹಳ್ಳಿ, ಮಲ್ಲಯ್ಯನಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net