ಚಾಮರಾಜನಗರ: ನಗರಸಭಾ ವ್ಯಾಪ್ತಿಯಲ್ಲಿ ಆ.16 ರಂದು ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹವರ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.