ಆ.18ರಂದು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

ಆ.18ರಂದು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
Published on

ಹಾಸನ: ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಅಂಗವಾಗಿ ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಆಗಸ್ಟ್ 18ರ ಭಾನುವಾರ ಬೆಳಿಗ್ಗೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಮಕ್ಕಳು 20 ರೂ. ಶುಲ್ಕವನ್ನು ನೀಡಿ ಸ್ಥಳದಲ್ಲೇ ನೋಂದಾಯಿಸಿಕೊಳ್ಳಬಹುದು.
ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಒಟ್ಟು ಆರು ವಿಭಾಗಗಳಲ್ಲಿ ಪ್ರತಿ ವಿಭಾಗಕ್ಕೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಜತೆಗೆ ಎರಡು ಸಮಾಧಾನಕರ ಬಹುಮಾನ ನೀಡಲಾಗುವುದು. ಭಾನುವಾರ ಬೆಳಿಗ್ಗೆ 10.15ಕ್ಕೆ ಪ್ರಾರಂಭವಾಗುವ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ನೆರವೇರಿಸಲಿದ್ದಾರೆ. ಡಯಟ್ ನಿರ್ದೇಶಕರಾದ ಪುಷ್ಪಲತಾ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ, ಹಾಸನ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಬಿ. ರವಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ವೇಣುಕುಮಾರ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ತಾರನಾಥ್, ಎಚ್.ಸಿ. ಬಸವರಾಜು, ಅಣ್ಣಪ್ಪ, ಆರ್.ಸಿ. ಕರದಕಟ್ಟಿ ಇತರರು ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ವೈ.ಬಿ. ರವಿ ಮೊ: 9448048441, ಎಚ್.ಎಂ. ರಮೇಶ್ ಮೊ. 9449054808 ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net