ಆ.21 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

bkt-19-4
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಆಗಸ್ಟ 21 ರಿಂದ ಸೆಪ್ಟೆಂಬರ 2 ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಣಗಣದಲ್ಲಿ ನಡೆದ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಿದ್ದು, 6 ತಾಲೂಕುಗಳಲ್ಲಿ ಮಾತ್ರ ಪರೀಕಾ ಕೇಂದ್ರಗಳನ್ನು ನಿಗದಿ ಪಡಿಸಲಾಗಿರುತ್ತದೆ. ಬಾಗಲಕೋಟೆಯ ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ 563, ಜಮಖಂಡಿಯ ಬಿ.ಹೆಚ್.ಎಸ್ ಮತ್ತು ಟಿಜಿಪಿ ಪದವಿ ಪೂರ್ವ ಕಾಲೇಜಿನಲ್ಲಿ 749, ಹುನಗುಂದ ವಿ.ಎಮ್.ಎಸ್.ಆರ್ ವಸ್ತ್ರದ ಪ.ಪೂ ಕಾಲೇಜನಲ್ಲಿ 1122, ಬದಾಮಿ ಎಸ್.ಜಿ.ಎಮ್.ಕೆ ಪ.ಪೂ ಕಾಲೇಜಿನಲ್ಲಿ 930, ಮುದೋಳ ಆರ್.ಎಮ್.ಜಿ ಪ.ಪೂ ಕಾಲೇಜಿನಲ್ಲಿ 655, ಬೀಳಗಿಯ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ 540, ಜಮಖಂಡಿ ಬಾಲಕಿಯರ ಸರಕಾರಿ ಪ.ಪೂ ಕಾಲೇಜನಲ್ಲಿ 404, ಬಾಗಲಕೋಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 654 ಸೇರಿ ಒಟ್ಟು 5617 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಪ್ರವೇಶ ಪತ್ರಗಳು ಈಗಾಗಲೇ ಆಯಾ ಕಾಲೇಜುಗಳಿಗೆ ವಿತರಿಸಲ್ಪಟ್ಟಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೂ ಆಸನ ವ್ಯವಸ್ಥೆ ಮಾಡಿರಬೇಕು. ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ ಅಂದರೆ 200 ಮೀಟರಗಳವರೆಗೆ ನಿಷೇದಿತ ಪ್ರದೇಶವೆಂದು ಘೋಸಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಸೂಚನೆ ನೀಡಲಾಗುತ್ತದೆ. ಪರೀಕ್ಷಾ ಕೆಲಸಗಳಿಗಾಗಿ ಅಧಿಕೃತವಾಗಿ ನಿಯೋಜಿಸಿದವರನ್ನು ಹೊರತು ಪಡಿಸಿ ಬೇರೆ ಯಾವುದೇ ಸಿಬ್ಬಂದಿ ಕೊಠಡಿ ಪ್ರವೇಶಿಸಿವುದು ಕಡ್ಡಾಯವಾಗಿ ನಿರ್ಭಂದವಿರುತ್ತದೆ. ಪರೀಕ್ಷಾ ಕಾರ್ಯನಿರತ ಉಪನ್ಯಾಸಕರು ಸಿಬ್ಬಂಧಿ ಮತ್ತು ವಿದ್ಯಾರ್ಥಿಗಳು ಮೊಬೈಲ್ ಪೊನ್ ಲ್ಯಾಪ್ ಟಾಪ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ನಿಷೇಧಿಸಲಾಗಿರುತ್ತದೆ.

ಎಲ್ಲಾ ಪರೀಕ್ಷಾ ಕೆಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ ಒದಗಿಸಲಾಗಿದ್ದು, ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಂಡು ಪರೀಕ್ಷೆಯನ್ನು ಯಶ್ವಸಿಗೊಳಿಸಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ತಹಶೀಲ್ದಾರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net