ಆ. 25ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಗುಂಡ್ಲುಪೇಟೆ ತಾಲೂಕುಮಟ್ಟದ ದಸರಾ ಕ್ರೀಡಾಕೂಟವನ್ನು ಆ.25ರಂದು ಬೆಳಿಗ್ಗೆ 10 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಪುರಸಭೆ ಅಧ್ಯಕ್ಷರಾದ ಮಧುಸೂದನ್, ಉಪಾಧ್ಯಕ್ಷರಾದ ಅಣ್ಣಯ್ಯಸ್ವಾಮಿ, ಸದಸ್ಯರಾದ ಜಿ.ಎಸ್. ಕಿರಣ್, ತಹಶೀಲ್ದಾರ್ ತನ್ಮಯ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಹೆಚ್.ಆರ್. ಷಣ್ಮುಗಂ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಶರವಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net