

ಬೆಳಗಾವಿ: ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ 2023-24ನೇ ಸಾಲಿನ (ದಿಶಾ) ತ್ರೈಮಾಸಿಕ ಸಭೆ ಜಿಲ್ಲಾ ಪಂಚಾಯತಿ ಬೆಳಗಾವಿ ಸಭಾ ಭವನದಲ್ಲಿ ಆಗಸ್ಟ್ 29 ರಂದು ಬೆಳಗ್ಗೆ 11 ಕ್ಕೆ ನಡೆಯಲಿದೆ. ಲೋಕಸಭಾ ಸದಸ್ಯೆ ಮಂಗ ಅಂಗಡಿ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.