ಆ.3,ರೆಡ್ಡಿ ಜನಸಂಘದಿಂದ ಪ್ರತಿಭಾ ಪುರಸ್ಕಾರ

ctd300005
Published on


ಚಿತ್ರದುರ್ಗ: ಚಿತ್ರದುರ್ಗ ರೆಡ್ಡಿ ಜನಸಂಘದಿಂದ, ಪ್ರತಿಭಾವಂತ ವಿದ್ಯಾರ್ಥಿಗಳು, ಮಾಜಿ ಸೈನಿಕರು, ನಿವೃತ್ತ ಅಧಿಕಾರಿಗಳು ಹಾಗೂ ನೌಕರರ ಸನ್ಮಾನ ಸಮಾರಂಭ ಆ.3ರ ಮಧ್ಯಾಹ್ನ 12 ಗಂಟೆಗೆ ನಗರದ ಕಮ್ಮಾರೆಡ್ಡಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ರೆಡ್ಡಿ ಜನ ಸಂಘದ ಕಾರ‌್ಯದರ್ಶಿಗಳಾದ ಜೆ.ಪರಶುರಾಮ್, ಡಿ.ಕೆ.ಶೀಲಾ ತಿಳಿಸಿದ್ದಾರೆ. 2023-24ನೇ ಸಾಲಿನಲ್ಲಿ ಶೇ.85ಕ್ಕೂ ಅಧಿಕ ಅಂಕಗಳೊಂದಿಗೆ ಉತ್ತೀರ್ಣರಾದ ಸಮುದಾಯದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತದೆ. ಮಾಜಿ ಸೈನಿಕರು ಹಾಗೂ 2023 ಏ.1 ರಿಂದ 2024 ಜುಲೈ 31ರ ವರೆಗೆ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಮತ್ತು ರಾಷ್ಟ್ರ ಮಟ್ಟದ ವಿಶೇಷ ಪ್ರಶಸ್ತಿಗೆ ಭಾಜನರಾದ ಸಮುದಾಯದ ಅಧಿಕಾರಿ, ಸಿಬ್ಬಂದಿಯನ್ನು ಅಭಿನಂದಿಸಲಾಗುವುದು. ಜಿಲ್ಲಾ ರೆಡ್ಡಿ ಜನಸಂಘದ ಅಧ್ಯಕ್ಷ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಎಂ.ಕೆ.ಅನಂತರೆಡ್ಡಿ, ಖಂಜಾಚಿ ಜಿ.ವೈ.ಸುರೇಶ್‌ಕುಮಾರ್ ಮತ್ತಿತರರು ಇರುತ್ತಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net