

ಬಾಗಲಕೋಟೆ: ನಗರದಲ್ಲಿ ಪುತ್ಥಳಿ ಸ್ಥಾಪನೆ ಮಾಡಲು ಎಲ್ಲ ಇಲಾಖೆಯ ಪರವಾನಿಗೆ ದೊರೆತ್ತಿದ್ದು, ಆ.೨೫ ರಂದು ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಸ್ಥಾಪಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಶಾಸಕ ಎಚ್.ವೈ.ಮೇಟಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸರಳ ರೀತಿಯಿಂದ ಪುತ್ಥಳಿ ಸ್ಥಾಪನೆ ನಡೆಯಲಿದ್ದು, ಅಂದು ನಡೆಯುವ ಕಾರ್ಯಕ್ರಮಕ್ಕೆ ಈ ನಾಯಕರು ಆಗಮಿಸಲಿದ್ದಾರೆ ಎಂದರು.
ಪುತ್ಥಳಿ ಅಳವಡಿಸುವ ಕಾರ್ಯ ಪೂರ್ಣಗೊಂಡ ಬಳಿಕ ಬೃಹತ್ ಪ್ರಮಾಣದಲ್ಲಿ ಅನಾವರಣ ಕಾರ್ಯಕ್ರಮ ಏರ್ಪಡಿಸಲಾಗುವುದು. ಆವಾಗ ಸಕಲ ಸಮಾಜಗಳು ಭಾಗವಹಿಸಲಿವೆ ಎಂದರು.
ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ, ಗುಂಡೂರಾವ್ ಶಿಂಧೆ, ಅಂಬಾಜಿ ಜೋಶಿ, ಎಂ.ಆರ್.ಶಿಂಧೆ, ರಾಜು ವಾಘ ಇದ್ದರು.