ಆಂಗ್ಲ ನಾಮಫಲಕಗಳ ತೆರವಿಗೆ ಮನವಿ

Manavi
Published on

ಚಿತ್ರದುರ್ಗ: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಖಾಸಗಿ ಶಾಲಾ-ಕಾಲೇಜುಗಳಲ್ಲಿ, ಬಸ್‌ಗಳ ಮೇಲೆ ಅಳವಡಿಸಿರುವ ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಿಡಿಪಿಐ ಕೆ.ರವಿಶಂಕರ್‌ರೆಡ್ಡಿ ಅವರಿಗೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಮಂಗಳವಾರ ಮನವಿ ಸಲ್ಲಿಸಿದರು.

ವಿಜಯಸೇನೆ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಪದಾಧಿಕಾರಿಗಳಾದ ರಾಜಣ್ಣ, ಗೋಪಿನಾಥ್, ಅವಿನಾಶ್, ಅಖಿಲೇಶ್, ಮಹಮದ್ ರಫಿ, ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net