

ಚಿತ್ರದುರ್ಗ: ತಾಲೂಕಿನ ದೊಡ್ಡಸಿದ್ಧವ್ವನಹಳ್ಳಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ರಾಜ ಬೀದಿಗಳಲ್ಲಿ ಸ್ವಾಮಿಯ ಹೂವಿನ ಪಲ್ಲಕ್ಕಿ ಮಹೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
ಸ್ವಾಮಿಯ ಜಾತ್ರೆ ಪ್ರಯುಕ್ತ ಕಳೆದೊಂದು ವಾರದಿಂದಲೂ ಗ್ರಾಮದಲ್ಲಿ ವಿವಿಧ ರೀತಿಯ ಪೂಜಾ ಕೈಂಕರ್ಯ ನಡೆದಿದ್ದು, ಮುಳ್ಳಿನ ಪವಾಡ ಸೇವೆ, ದೊಡ್ಡ ರಥೋತ್ಸವ, ಹೂವಿನ ಪಲ್ಲಕ್ಕಿ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡರು. ಈ ಬಾರಿಯ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.