

ಆಲೂರು : ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿಗೆ ಸೇರಿದ ದಡದಳ್ಳಿ ಗ್ರಾಮದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಭವನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ₹2 .50 ಲಕ್ಷ ಮೊತ್ತದ ಚೆಕ್ ಅನ್ನು ದೇಗುಲ ಸಮಿತಿ ಪದಾಧಿಕಾರಿಗಳಿಗೆ ನೀಡಲಾಯಿತು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯೋಜನಾಧಿಕಾರಿ ಪುರುಷೋತ್ತಮ್, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಾಮಾಜಿಕ ಕಾರ್ಯದ ಜತೆಗೆ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ದೇಗುಲ ಸಮಿತಿಯವರು ಅನುದಾನದ ಸದುಪಯೋಗ ಪಡೆಯಬೇಕು ಎಂದರು.
ಸಂದರ್ಭದಲ್ಲಿ ತಾಲೂಕು ವೀರಶೈವ ಸಂಘದ ಅಧ್ಯಕ್ಷ ರೇಣುಕಾ ಪ್ರಸಾದ್, ಉಪಾಧ್ಯಕ್ಷ ಡಿ.ಎಸ್ ಜಯಣ್ಣ ದಡದಳ್ಳಿ, ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಕಸಾಪ ಅಧ್ಯಕ್ಷ ಗೋಪಾಲಕೃಷ್ಣ, ಗೌರವಾಧ್ಯಕ್ಷ ಬಾಲಕೃಷ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಯಶೋಧ, ಸೇವಾ ಪ್ರತಿನಿಧಿಗಳಾದ ನಾಗಮಣಿ, ಸಣ್ಣಮ್ಮ ಇತರರು ಹಾಜರಿದ್ದರು