ಆಂಜನೇಯ ಸ್ವಾಮಿ ರಥೋತ್ಸವ ಅದ್ದೂರಿ

Rathothsava
Published on

ಚಿತ್ರದುರ್ಗ: ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿಯ ದೊಡ್ಡ ರಥೋತ್ಸವವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಅದ್ದೂರಿಯಾಗಿ ಜರುಗಿತು.

ಸ್ವಾಮಿಯ ರಥವನ್ನು ಎಳೆಯುವ ಕ್ಷಣಕ್ಕಾಗಿ ಅನೇಕ ಭಕ್ತರು ಕಾತರದಿಂದ ಕಾಯುತ್ತಿದ್ದರು. ಚಾಲನೆ ದೊರೆಯುತ್ತಿದ್ದ ಆಂಜನೇಯ ಸ್ವಾಮಿ ಕೀ ಜೈ, ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂದು ಜಯಘೋಷ ಮೊಳಗಿಸಿದರು. ಈ ವೇಳೆ ಭಕ್ತೋತ್ಸಾಹ ಮುಗಿಲುಮುಟ್ಟಿತ್ತು.

ರಥಕ್ಕೆ ಬಾಳೆಹಣ್ಣನ್ನು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಮುಂಜಾನೆ ಅಭಿಷೇಕ, ಅಲಂಕಾರ ಸೇವೆ ಸೇರಿ ಇತರೆ ಪೂಜಾ ಕೈಂಕರ್ಯ ಶಾಸ್ತ್ರೋಕ್ತವಾಗಿ ನೆರವೇರಿದವು.

ರಥೋತ್ಸವಕ್ಕೂ ಮುನ್ನ ದೇಗುಲದಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಕರೆತಂದು ಪೂಜೆ ಸಲ್ಲಿಸಲಾಯಿತು. ನಂತರ ಮೂರ್ತಿಯನ್ನು ರಥದ ಬಳಿ ಕರೆತಂದು ಪ್ರದಕ್ಷಿಣೆ ಹಾಕಿಸಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಆನಂತರ ಮುಕ್ತಿಬಾವುಟ ಮತ್ತು ಹೂವಿನ ಹಾರ ಹರಾಜು ಪ್ರಕ್ರಿಯೆ ನಡೆಯಿತು.

30ರಂದು ಸಂಜೆ 5ಕ್ಕೆ ಮಂಗಳಸ್ನಾನದ ನಂತರ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net