

ಕಲಬುರಗಿ : ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಾಧೀಶರು ಆಗಿರುವ ಆಂದ್ರಪ್ರದೇಶದ ರಾಜ್ಯಪಾಲರಾದ ನ್ಯಾ.ನಜೀರ್ ಸಾಬ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಅವರನ್ನು ನಗರದ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಬರ ಮಾಡಿಕೊಳ್ಳಲಾಯಿತು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ತಂಗಿರುವ ಅವರನ್ನು ಗುಲ್ಬರ್ಗ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಗುಪ್ತಲಿಂಗ ಪಾಟೀಲ್, ಹೈಕೋರ್ಟ್ ಘಟಕದ ಉಪಾಧ್ಯಕ್ಷರಾದ ಅಶೋಕ ಮೂಲಗೆ ಹಾಗೂ ಪದಾಧಿಕಾರಿಗಳು ರಾಜ್ಯಪಾಲರಾದ ನ್ಯಾ.ಎಸ್..ಅಬ್ದುಲ್ ನಜೀರ್ ಸಾಬ್ ಅವರನ್ನು ಸನ್ಮಾನಿಸಿದರು.