ಆಂಬುಲೆನ್ಸ್ ಗೆ ಸೈಡ್ ಕೊಡದ ಕಾರು ಪೊಲೀಸ್ ವಶಕ್ಕೆ

IMG_20210720_130640
Published on

ಮಂಗಳೂರು: ಆಂಬುಲೆನ್ಸ್ ಗೆ ಸೈಡ್ ಕೊಡದ ಕಾರು ಹಾಗೂ ಚಾಲಕ ಕುಂಪಲ ನಿವಾಸಿ ಚರಣ್ ರಾಜ್ ಎಂಬಾತನನ್ನು ಕಂಕನಾಡಿ ನಗರ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತೊಕ್ಕೊಟ್ಟು ಕಡೆಯಿಂದ ಪಂಪುವೆಲ್ ಕಡೆಗೆ ಬರುತ್ತಿದ್ದ ಆಂಬುಲೆನ್ಸ್ ಎದುರಲ್ಲಿ ಹೋಗುತ್ತಿದ್ದ ಕಾರು ಚಾಲಕ ಸೈಡ್ ಕೊಡದೆ ಅಜಾಗರೂಕತೆಯಿಂದ ಚಲಾಯಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
ತುರ್ತು ವಾಹನ ಸಾಗುವಾಗ ಅಡ್ಡಿ ಉಂಟು ಮಾಡಿದರೆ ಒಂದು ಸಾವಿರ ರೂಪಾಯಿ ದಂಡ ಅಥವಾ ಆರು ತಿಂಗಳು ಜೈಲು ವಾಸ ಅನುಭವಿಸುವ ಶಿಕ್ಷೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net