ಆಕ್ಸಿಜನ್ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ

23Manju7-Web
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಡಿಸಿ ಡಾ. ಕೆ. ಹರೀಶಕುಮಾರ ಮಾತನಾಡಿದರು. ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಇದ್ದರು.
Published on

ಬೆಳಗಾವಿ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕಂಡು ಬಂದಿಲ್ಲ. ಆದರೂ ಕೋವಿಡ್-19 ಸೋಂಕಿತರ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ವಹಿಸಬೇಕು ಎಂದರು. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಬೇಡಿಕೆಗೆ ಅನುಗುಣವಾಗಿ ಆಕ್ಸಿಜನ್ ಸರಬರಾಜುದಾರರು ಪೂರೈಕೆ ಮಾಡಬೇಕು. ಅಲ್ಲದೆ, ಕೊಲ್ಲಾಪುರ ಮತ್ತು ಬಳ್ಳಾರಿ ಜಿಲ್ಲೆಯಿಂದ ಪಡೆಯುತ್ತಿದ್ದ ಆಕ್ಸಿಜನ್ ಯಥಾಪ್ರಕಾರ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆ ಕುರಿತು ದೂರು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ ಎಚ್.ವಿ., ಎಸ್ಪಿ ಲಕ್ಷ್ಮಣ ನಿಂಬರಗಿ, ಅಪರ ಡಿಸಿ ಯೋಗೇಶ್ವರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net