

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಹೇಳಿಕೆ | ಸಿಎಂ ಸಿದ್ಧರಾಮಯ್ಯ ಎಐಸಿಸಿ ಅಧ್ಯಕ್ಷ ಖರ್ಗೆ ಭಾಗಿ
ವಿಜಯವಾಣಿ ಸುದ್ದಿಜಾಲ ಕಲಬುರಗಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಜ್ಯೋತಿ ಯೋಜನೆಯನ್ನು ಆಗಷ್ಟ ತಿಂಗಳ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಕಲಬುರಗಿಯಲ್ಲಿ ಉದ್ಘಾಟಿಸಿ ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಸೋಮವಾರ ಜರುಗಿದ ಪತ್ರಿಕಾ ದಿನಾಚರಣೆ ಹಾಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಹಾಗೂ ವಿಜಯವಾಣಿ ಜತೆ ಮಾತನಾಡಿ, ರಾಜ್ಯಮಟ್ಟದ ಬೃಹತ್ ಸಮಾರಂಭವನ್ನು ಕಲಬುರಗಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.
ಮುಖ್ಯಮAತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಎಐಸಿಸಿ ಅಧ್ಯಕ್ಷರು ಆಗಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಕಲ್ಯಾಣ ಕರ್ನಾಟಕದ ಸಚಿವರು, ಶಾಸಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಈ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಇನ್ನಿತರ ಗಣ್ಯರಿಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದರು.
ಸಮಾರಂಭವನ್ನು ಕಲಬುರಗಿ ನಗರದಲ್ಲಿ ಎಲ್ಲಿ ಆಯೋಜಿಸಬೇಕು ಎಂಬುದರ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮತ್ತು ನಾನು ಸೇರಿಕೊಂಡು ಚರ್ಚೆ ನಡೆಸಿz್ದೆÃವೆ.ಇನ್ನೊಂದು ಸುತ್ತು ಅಧಿಕಾರಿಗಳ ಸಭೆಯನ್ನು ನಡೆಸಿ ಸ್ಥಳ ಹಾಗೂ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ಗೃಹ ಜ್ಯೋತಿ ಯೋಜನೆ ಲಾಭವನ್ನು ಪಡೆದುಕೊಳ್ಳಲು ಅರ್ಹರೆಲ್ಲರು ಆನ್‌ಲೈನ್ ಇಲ್ಲವ ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಹಾಕಿದ ಎಲ್ಲರಿಗೂ ಯೋಜನೆ ಲಾಭ ಸಿಗಲಿದೆ. ಆದರೆ, ಕೆಲವೊಂದು ಷರತ್ತುಗಳನ್ನು ಸರ್ಕಾರ ವಿಧಿಸಿದೆ ಎಂದು ಡಾ.ಪಾಟೀಲ್ ಹೇಳಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಹಾಗೂ ಐದು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ೫ ಕೆಜಿ ಅಕ್ಕಿ ಜತೆಗೆ ಐದು ಕೆಜಿ ಅಕ್ಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ಉಳಿದವು ಜಾರಿಗೊಳಿಸಲು ದಿನಾಂಕ ನಿಗದಿಪಡಿಸಲಾಗುತ್ತಿದೆ ಎಂದರು.
== ಕೋಟ್==
ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಗೆ ಮಾಸಿಕವಾಗಿ ೨ ಸಾ.ರೂ. ನೇರವಾಗಿ ಅವರ ಖಾತೆಗೆ ಜಮಾಗೊಳಿಸುವ ಭಾಗ್ಯ ಲಕ್ಷಿö್ಮ ಯೋಜನೆಗೆ ಆಗಷ್ಟ ೧೫ ರಂದು ಚಾಲನೆ ಸಿಗಲಿದೆ. ೧೪ರಿಂದಲೇ ಫಲಾನುಭವಿಗಳ ಖಾತೆಗೆ ಹಣ ಜಮಾಗೊಳ್ಳಲು ಆರಂಭಿಸಲು ಯೋಚಿಸಲಾಗುತ್ತಿದೆ. ಈ ಯೋಜನೆ ಲಾಭ ಪಡೆಯಲು ಎಪಿಎಲ್, ಬಿಪಿಎಲ್ ಎಂಬ ಬೇಧ ಇಲ್ಲ. ಎಲ್ಲರು ಅರ್ಜಿ ಸಲ್ಲಿಸಬಹುದಾಗಿದೆ. ಆದಾಯ ತೆರಿಗೆ ಪಾವತಿಸುವರಿಗೆ ಮಾತ್ರ ಅನ್ವಯ ಆಗಲ್ಲ.
| ಡಾ.ಶರಣಪ್ರಕಾಶ ಪಾಟೀಲ್ ವೈದ್ಯಕೀಯ ಶಿಕ್ಷಣ ಸಚಿವ
==