ಆಗಸ್ಟ್ ಅಂತ್ಯಕ್ಕೆ ಜಯದೇವ ಲೋಕಾರ್ಪಣೆ

1706klb02
Published on

ಕಲಬುರಗಿ: ೩೭೧ (ಜೆ) ಕಲಂ ಜಾರಿಯಾದ ದಶಮಾನೋತ್ಸವದ ಕೊಡುಗೆಯಾಗಿ ಕೆಕೆಆರ್‌ಡಿಬಿ ಅನುದಾನದಿಂದ ನಗರದಲ್ಲಿ ೧೯೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ವೈದ್ಯಕೀಯ ಶಿP್ಷÀಣ, ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಕ್ ಹೇಳಿದರು.
ನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಸೋಮವಾರ ಕಾಮಗಾರಿ ಪರಿಶೀಲಿಸಿದ ಅವರು, ಜಿಮ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯಸಭೆ ವಿಪP್ಷÀ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ಹೇಳಿದರು.
ಜಯದೇವ ಆಸ್ಪತ್ರೆಗೆ ಸಿಬ್ಬಂದಿಯಿದ್ದು, ನೂತನ ಕಟ್ಟಡ ನಿರ್ಮಾಣ ಸಾಮರ್ಥ್ಯಕ್ಕೆ ತಕ್ಕಂತೆ ಸಿಬ್ಬಂದಿ ಭರ್ತಿ ಮಾಡಲಾಗುವುದು. ಜಿಮ್ಸ್ ಆವರಣದಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಇದರ ಪೀಠೋಪಕರಣಕ್ಕೆ ಟೆಂಡರ್ ಕರೆದಿದ್ದು, ಆಸ್ಪತ್ರೆಗೆ ಸಿಬ್ಬಂದಿ ನೇಮಕಕ್ಕೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಾಗುವುದು. ಜಿಮ್ಸ್ನಲ್ಲಿನ ಇಲ್ಲದ ವಿಶೇಷ ವೈದ್ಯಕೀಯ ಸೇವೆಗಳು ಇಲ್ಲಿ ಲಭ್ಯ ಇರಲಿವೆ ಎಂದು ಹೇಳಿದರು.
ಜಯದೇವ ಹೃದ್ರೋಗ ಆಸ್ಪತ್ರೆ ಸಮನ್ವಯಾಧಿಕಾರಿ ಸಂತೋಷ, ಪ್ರೊಜೆಕ್ಟರ್ ಮ್ಯಾನೇಜರ್ ಪ್ರಸಾದ ಇತರರಿದ್ದರು.

ಲೋಕಸಭೆ ಚುನಾವಣೆಗೆ ಗೆಲುವಿಗೆ ಕೊಡುಗೆ
ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕ್ಷೇತ್ರದ ಜನರಿಗೆ ಕೊಡುಗೆಯಾಗಿ ನಮ್ಮ ಸರ್ಕಾರದಿಂದ ಟ್ರಾಮಾ ಕೇರ್ ಸೆಂಟರ್ ಹೊರತಾಗಿ ಕ್ರಿಟಿಕಲ್ ಕೇರ್ ಯೂನಿಟ್ ಮತ್ತು ಐವತ್ತು ಹಾಸಿಗೆಯ ಸುಟ್ಟ ಗಾಯಗಳ ಚಿಕಿತ್ಸೆ ಘಟಕ ಮಂಜೂರಾಗಿದೆ. ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ೧೫೦ ಹಾಸಿಗೆಯ ಕ್ಯಾನ್ಸರ್ ವಿಸ್ತರಣೆ ಕಟ್ಟಡ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಒಂದು ತಿಂಗಳಲ್ಲಿ ಅಡಿಗಲ್ಲು ಹಾಕಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ಜಿಮ್ಸ್ನಲ್ಲಿ ಸಾವು ವಿಚಾರಣೆ: ಜಿಮ್ಸ್ ಆಸ್ಪತ್ರೆಯಲ್ಲಿ ಹಾಸಿಗೆ ಇಲ್ಲದೆ ಬಡ ಮಹಿಳೆ ಮೃತಪಟ್ಟಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಈ ಬಗ್ಗೆ ಸಿ.ಸಿ.ಟಿ.ವಿ ದೃಶ್ಯಾವಳಿ ಪರಿಶೀಲಿಸಿ ವಿಚಾರಣೆಗೆ ಸೂಚಿಸಲಾಗಿದೆ. ವೈದ್ಯರು ತಪ್ಪು ಎಸಗಿರುವುದು ಕಂಡು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net