ಆಗುಂಬೆ ಘಾಟಿಯಲ್ಲಿ ಇನ್ನೂ ಒಂದು ತಿಂಗಳು ಭಾರಿ ವಾಹನ ಸಂಚಾರ ಸ್ಥಗಿತ

TTH WEB 2
Published on

ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಿದ್ದ ನಿಷೇಧವನ್ನು ಸೆಪ್ಟೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗಿದೆ. ಸತತ ಮಳೆಯಿಂದ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂ ಕುಸಿತ ಉಂಟಾದ ಕಾರಣ ಆ.31ರ ತನಕ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಈ ಅವಧಿಯನ್ನು ಸೆಪ್ಟೆಂಬರ್ ತಿಂಗಳ ಅಂತ್ಯದ ತನಕ ವಿಸ್ತರಿಸಿರುವ ಜಿಲ್ಲಾಡಳಿತ, ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net