ಆಟೋಗೆ ಕಾರು ಡಿಕ್ಕಿ ಹೊಡೆದು ಒಬ್ಬ ಸಾವು

23 mlv 5
ಅಪಘಾತ ಮಾಡಿದ ಕಾರು
Published on

ಮಳವಳ್ಳಿ: ತಾಲೂಕಿನ ಹೊಂಬೇಗೌಡನದೊಡ್ಡಿ ಗೇಟ್ ಬಳಿ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ಶನಿವಾರ ತಡರಾತ್ರಿ ಆಟೋಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಒಬ್ಬ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.

ಕನಕಪುರ ತಾಲೂಕಿನ ರಾಮನಹಳ್ಳಿಯ ಚನ್ನರಾಜು(32) ಮೃತರು. ಇವರು ತಮ್ಮ ಕುಟುಂಬದವರೊಡನೆ ಸ್ವಗ್ರಾಮದಿಂದ ಮಹದೇಶ್ವರ ಬೆಟ್ಟಕ್ಕೆ ಆಟೋದಲ್ಲಿ ತೆರಳುತ್ತಿದ್ದರು ಎನ್ನಲಾಗಿದ್ದು, ಮದ್ದೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿ ಚನ್ನರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಸಿಪಿಐ ಎಂ.ಜಗದೀಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net