ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ

13 ckm 10
ಚಿಕ್ಕಮಗಳೂರಿನ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. ೨೬, ೨೭ ರಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಪರಿಶೀಲನೆ ನಡೆಸಿದರು. ವರಸಿದ್ಧಿ ವೇಣುಗೋಪಾಲ್, ಟಿ.ರಾಜಶೇಖರ್, ಸುಜಾತ ಶಿವಕುಮಾರ್, ಅನುಮಧುಕರ್, ಶಾದಬ್ ಆಲಂಖಾನ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉz್ದೆÃಶ ಹೊಂದಲಾಗಿದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ನಗರಸಭೆಯಿಂದ ಬುಧವಾರ ನಗರದ ವಾರ್ಡ್ ನಂ. ೨೬, ೨೭ ರಲ್ಲಿ ಏರ್ಪಡಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಭಾವಗಹಿಸಿ ಮಾತನಾಡಿದ ಅವರು, ಜನಸಂಪರ್ಕ ಸಭೆಯಲ್ಲಿ ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ, ಸಣ್ಣ ನೀರಾವರಿ ಇಲಾಖೆ, ಮೆಸ್ಕಾಂ, ಆಹಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಗೆ ಬರುವ ಸಮಸ್ಯೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಆಗಮಿಸಿದ್ದಾರೆ. ಪಕ್ಷಾತೀತವಾಗಿ ಎಲ್ಲರೂ ಭಾಗವಹಿಸುವ ಮೂಲಕ ನಾಗರೀಕರ ಸಮಸ್ಯೆಗಳಿಗೆ ಸ್ಪಂದಿಸಿ ಇತ್ಯರ್ಥಪಡಿಸಲು ಈ ಸಭೆ ಸಹಕಾರಿಯಾಗಿದೆ ಎಂದರು.

ಸರ್ಕಾರ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ವಾರ್ಷಿಕ ರೂ. ೫೯ ಸಾವಿರ ಕೋಟಿ ವ್ಯಯ ಮಾಡುತ್ತಿದೆ. ಈ ಮಧ್ಯೆ ವಿವಿಧ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ದೇವಸ್ಥಾನ, ಸಮುದಾಯಭವನ, ರಸ್ತೆ ದುರಸ್ಥಿಗೆ ಅನುದಾನ ನೀಡಲು ನಿರ್ಧಾರ ಕೈಗೊಂಡಿದೆ. ಸರ್ಕಾರದ ಅನುದಾನದ ಜೊತೆಗೆಸ್ಥಳೀಯ ಸಂಸ್ಥೆಗಳ ಅನುದಾನವನ್ನು ಬಳಸಿಕೊಂಡು ಚರಂಡಿ, ರಸ್ತೆ ದುರಸ್ಥಿ ಮಾಡಬೇಕು. ಜೊತೆಗೆ ನಾಗರೀಕರ ಮೂಲ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಸ್ವಚ್ಚತೆ ಮುಂತಾದವುಗಳಿಗೆ ಸ್ಪಂದಿಸಲು ಜನಸಂಪರ್ಕ ಸಭೆ ಆಯೋಜಿಸಲಾಗಿದೆ ಎಂದು ಹೇಳಿದರು.

ಸೋಮೇಶ್ವರ ದೇವಸ್ಥಾನದ ಅಭಿವೃದ್ಧಿಗೆ ೨೦ ಲಕ್ಷ ರೂ. ಅನುದಾನ ಮಂಜೂರು ಮಾಡಲಾಗಿದ್ದು, ಇಂದು ಪೂಜೆ ಸಲ್ಲಿಸಲಾಗಿದೆ. ಸಮುದಾಯ ಭವನ ಮುಂದುವರೆದ ಕಾಮಗಾರಿಗೆ ೧೦ ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಆರಂಭವಾಗುವುದಾಗಿ ಭರವಸೆ ನೀಡಿದರು.

ವಾರ್ಡಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು. ಇದೇ ಸಮುದಾಯ ಭವನಕ್ಕೆ ಹಿಂದೆ ನಗರೋತ್ಥಾನದಿಂದ ೩೦ ಲಕ್ಷ ರೂ. ಮೀಸಲಿಟ್ಟಿದ್ದು ಟೆಂಡರ್ ಕರೆಯಲಾಗಿತ್ತು. ಆದರೆ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಒಟ್ಟು ನಗರೋತ್ಥಾನದಡಿ ರೂ. ೪ ಕೋಟಿ ರೂ. ವೆಚ್ಚದಲ್ಲಿ ನಗರದ ವಿವಿಧ ಬಡಾವಣೆಗಳ ಅಭಿವೃದ್ಧಿಗೆ ಹಣ ಮೀಸಲಿಡಲಾಗಿದೆ. ನಗರದಲ್ಲಿರುವ ಸಮುದಾಯ ಭವನಗಳನ್ನು ನಗರೋತ್ಥಾನದಡಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಸದÀ್ಯದಲ್ಲೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅರ್ಪಣೆ ಮಾಡುತ್ತೇವೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ನಗರದಲ್ಲಿ ಯುಜಿಡಿ ಮತ್ತು ಅಮೃತ್ ಯೋಜನೆಯ ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಮಸ್ಯೆಗಳ ಬಗ್ಗೆ ವೀಕ್ಷಣೆ ಮಾಡಿ ಚಾನಲ್ ಸ್ವಚ್ಚತೆಗೊಳಿಸಲು ಕ್ರಮ ವಹಿಸಬೇಕು. ಈಗಾಗಲೇ ನಗರದಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದ್ದು, ವಾರ್ಡಿನ ನಾಗರೀಕರು ಕಸವನ್ನು ಗಂಟೆ ಗಾಡಿಗೆ ಹಾಕುವ ಮೂಲಕ ಸ್ವಚ್ಚತೆ ಕಾಪಾಡಲು ನಗರಸಭೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ನಗರಸಭೆ ಸದಸ್ಯ ಟಿ.ರಾಜಶೇಖರ್ ಮಾತನಾಡಿ, ಯುಜಿಡಿ ಅಮೃತ್ ಯೋಜನೆ, ಎಂಐ ಚಾನಲ್ ಈ ಮೂರು ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ದೀಪದ ಕೆಳಗೆ ಕತ್ತಲು ಎಂಬAತೆ ಕೆಲವು ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸರಬರಾಜು ಕಡಿಮೆಯಾಗಿದೆ. ಈ ಸಂಬAಧ ನಾಗರೀಕರು ದಿನನಿತ್ಯ ನನ್ನ ಗಮನಕ್ಕೆ ತರುತ್ತಿದ್ದಾರೆ. ಸಮುದಾಯ ಭವನ ಅಭಿವೃದ್ಧಿಗೆ ಶ್ರಮಿಸಿದ್ದು, ಶಾಸಕರು ೧೦ ಲಕ್ಷ ರೂ. ಅನುದಾನ ನೀಡುವ ಮೂಲಕ ಅಭಿವೃದ್ಧಿಯಾದರೆ ನಾಗರೀಕರಿಗೆ ಅನುಕೂಲವಾಗಲಿದೆ. ನಗರಸಭೆ ಅಧಿಕಾರಿಗಳು ವಾರ್ಡ್ ವಿಂಗಡಣೆ ಮಾಡುವಾಗ ಗೊಂದಲ ಉಂಟುಮಾಡದೆ ಸರ್ವೆ ನಕಾಶೆ ಆಧರಿಸಿ ವಿಂಗಡಣೆ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ತಮ್ಮ ಕಳೆದ ೩೦ ತಿಂಗಳ ಆಡಳಿತಾವಧಿಯಲ್ಲಿ ಈ ವಾರ್ಡಿನ ಅಭಿವೃದ್ಧಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. ವಾರ್ಡಿನ ಎಲ್ಲಾ ರಸ್ತೆಗಳಿಗೆ ಡಿಸೆಂಬರ್ ತಿಂಗಳಿನಲ್ಲಿ ಡಾಂಬರೀಕರಣ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್, ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ಸದಸ್ಯ ಶಾದಬ್ ಆಲಂಖಾನ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net