ಆಡಳಿತದಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲಿ

oppo_0
oppo_0
Published on

ಗೊರೇಬಾಳ: ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಶಾಲೆಯ ಪ್ರಾಂಶುಪಾಲ ಕಾಳಿಂಗಪ್ಪ ಆಯನೂರು ಧ್ವಜಾರೋಹಣ ನೆರವೇರಿಸಿದರು. ನಮ್ಮ ರಾಜ್ಯಕ್ಕೆ ಮೊದಲು ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು. ಕರ್ನಾಟಕ ಎಂದು ಮರು ನಾಮಕರಣ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಹಾಗೂ ಸಾಹಿತಿಗಳ ಒತ್ತಾಯದ ಮೇರೆಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಕರ್ನಾಟಕ ರಾಜ್ಯ ಎಂದು ಬದಲಿಸಿದರು. ಆಡಳಿತ ಭಾಷೆಯನ್ನಾಗಿ ಕನ್ನಡಕ್ಕೆ ಪ್ರಾಶಸ್ತ್ಯ ನೀಡಬೇಕೆಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net