ಆಂತರಿಕ ಸೌಂದರ್ಯವೇ ಶ್ರೇಷ್ಠ

19 vikram 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಳಿದು ಹೋಗುವ ಬಾಹ್ಯ ಸೌಂದರ್ಯಕ್ಕಿಂತ ಜ್ಞಾನ, ಗುಣ, ಶೀಲಗಳೆಂಬ ಆಂತರಿಕ ಸೌಂದರ್ಯವೇ ಮನುಷ್ಯನಿಗೆ ಶ್ರೇಷ್ಠ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಪ್ರೊ. ಎಸ್.ಎಂ. ಶಿವಪ್ರಸಾದ ಹೇಳಿದರು.
ನಗರದ ಕ್ಲಾಸಿಕ್ ಕೆಎಎಸ್, ಐಎಎಸ್ ಸ್ಟಡಿ ಸರ್ಕಲ್ ಸಂಸ್ಥೆಯಲ್ಲಿ ಸ್ವಾತಂತ್ರೊೃೀತ್ಸವ ನಿಮಿತ್ತ ಗುರುವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶ, ನಾಡು, ನುಡಿಯನ್ನು ಸದಾ ಗೌರವಿಸಬೇಕು. ಸಮಾಜದಲ್ಲಿರುವ ವ್ಯತ್ಯಾಸ ಮತ್ತು ವಿಭಿನ್ನ ವ್ಯಕ್ತಿತ್ವಗಳನ್ನು ಗೌರವಿಸುವುದೇ ಮಾನವೀಯತೆ. ನೂತನ ತಂತ್ರಜ್ಞಾನದ ಪ್ರಗತಿಗೆ ನಾವು ತೆರೆದುಕೊಳ್ಳಬೇಕು. ಸಕಾರಾತ್ಮಕ ಚಿಂತನೆಗಳಿಂದ ಅಂತರಾತ್ಮ ಅರಿತುಕೊಂಡು ನಾವು ನಾವಾಗಬೇಕೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕ್ಲಾಸಿಕ್ ಸಮೂಹ ಸಂಸ್ಥೆಗಳ ನಿರ್ದೇಶಕ ಲಕ್ಷ್ಮಣ ಉಪ್ಪಾರ ಮಾತನಾಡಿ, ಜಗತ್ತು ಸ್ಪರ್ಧಾತ್ಮಕವಾಗಿ ಓಡುತ್ತಿದ್ದು, ನಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗುರಿ ತಲುಪಬೇಕು ಎಂದರು.
ಹಿರಿಯ ಸಾಹಿತಿ ಪ್ರೊ. ಹರ್ಷ ಡಂಬಳ ಮಾತನಾಡಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಾಧ್ಯಾಪಕ ಡಾ. ರಾಜೇಶ ಚಿಟಗುಪ್ಪಿ, ಕ್ಲಾಸಿಕ್ ಸಂಸ್ಥೆ ಮುಖ್ಯ ವ್ಯವಸ್ಥಾಪಕಿ ಸುಜಾತಾ ಪಿ., ವ್ಯವಸ್ಥಾಪಕ ದೀಪಕ ಜೋಡಂಗಿ, ಇತರರು ಇದ್ದರು.
ಬಸವರಾಜ ಕುಪ್ಪಸಗೌಡರ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net