ಆತ್ಮನಿರ್ಭರ ಭಾರತದ ಕನಸು ಸಾಕಾರ

SKP IND
Published on

ಸಕಲೇಶಪುರ: ಸ್ವದೇಶಿ ವಸ್ತುಗಳ ಬಳಕೆ ಹೆಚ್ಚಾದಂತೆ ಆತ್ಮನಿರ್ಭರ ಭಾರತದ ಕನಸು ಸಾಕಾರಗೊಳ್ಳಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕು ಆಡಳಿತದಿಂದ ಶುಕ್ರವಾರ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಲಕ್ಷಾಂತರ ಮಹನೀಯರ ಬಲಿದಾನದಿಂದ ದೊರೆತಿರುವ ಸ್ವಾತಂತ್ರೃದಿಂದ ಭಾರತ ಅಭಿವೃದ್ಧಿಯತ್ತ ಸಾಗುತ್ತಿದೆ. ದೇಶ ಬೃಹತ್ ಅಭಿವೃದ್ಧಿಯಾಗಬೇಕಾದರೆ ದೇಶದ ಉತ್ಪಾದನಾ ವಲಯ ಬೆಳೆಯಬೇಕು. ದೇಶದಲ್ಲಿ ಸಿದ್ಧಗೊಂಡ ಉತ್ಪನ್ನಗಳನ್ನು ಬಳಸುವ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು. ವಿದ್ಯಾರ್ಥಿಗಳು ಹೆಚ್ಚೆಚ್ಚು ವೃತ್ತಿಪರತೆ ಬೆಳೆಸಿಕೊಂಡಾಗ ದೇಶದ ಅಭಿವೃದ್ಧಿಗೆ ನೆರವಾಗಲಿದೆ ಎಂದರು.

ಉಪವಿಭಾಗಾಧಿಕಾರಿ ರಾಜೇಶ್ ಮಾತನಾಡಿ, ದೇಶದ ಸ್ವಾತಂತ್ರೃಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಹನೀಯರ ತ್ಯಾಗಕ್ಕೂ ಅರ್ಥ ಸಿಗಲಿದೆ ಎಂದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಶಾಲಾ ಮಕ್ಕಳು ನೃತ್ಯರೂಪಕ ನಡೆಸಿಕೊಟ್ಟರು. ತಹಸೀಲ್ದಾರ್ ಸುಪ್ರೀತಾ, ಪುರಸಭೆ ಅಧ್ಯಕ್ಷೆ ಜ್ಯೋತಿ ರಾಜ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net