

ಯಾದಗಿರಿ: ಪ್ರಧಾನ ಮಂತ್ರಿ ಆತ್ಮನಿರ್ಭರ್ ನಿಧಿ ಯೋಜನೆ ಲಾಭ ಪಡೆದು ಪ್ರಗತಿಯಲ್ಲಿರುವ ಜಿಲ್ಲೆಗಳ ಪೈಕಿ ಯಾದಗಿರಿ ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು.
ಜಿ¯್ಲÁಡಳಿತ, ಜಿ¯್ಲÁ ಕೌಶಲ ಮಿಷನ್ ಹಾಗೂ ಜಿ¯್ಲÁ ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಬುಧವಾರ ಹಮ್ಮಿಕೊಂಡ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ( ಪಿಎಂ ಸ್ವನಿಧಿ) ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಈ ಯೋಜನೆಯಡಿ ಬೀದಿ ಬದಿ ವ್ಯಾಪಾರವನ್ನು ವಿಸ್ತರಿಸಿಕೊಳ್ಳಲು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಿಕೊಡಲಾಗಿದ್ದು, ಈ ಸೌಲಭ್ಯ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.
ಈ ಯೋಜನೆಯಡಿ ಯಾದಗಿರಿ ಜಿಲ್ಲೆ ಶೇ.೧೧೧ ಪ್ರಗತಿ ಸಾಧಿಸಿದೆ. ಸಾಲ ಸೌಲಭ್ಯದ ಜತೆಗೆ ಡಿಜಿಟಲï ವ್ಯವಹಾರ ಮಾಡಲು ಕ್ಯೂ ಆರ್ ಕೊಡ್ ಉಪಯೋಗಿಸಬೇಕು. ಎಲ್ಲ ಬೀದಿ ವ್ಯಾಪಾರಿಗಳು ಕಡ್ಡಾಯವಾಗಿ ನಗರಸಭೆಯಿಂದ ನೀಡಲಾಗುವ ಗುರುತಿನ ಚೀಟಿ ತೆಗೆದುಕೊಳ್ಳಬೇಕು. ವ್ಯವಹಾರದ ಜತೆಗೆ ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.
ಜಿ¯್ಲÁ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಭೀಮರಾವ ಪಂಚಾಳ ಮಾತನಾಡಿ, ಜಿ¯್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ವಿತರಿಸಲು ಬಾಕಿ ಇರುವ ಅರ್ಜಿ ಕೂಡಲೇ ವಿಲೇವಾರಿ ಮಾಡಲು ಈಗಾಗಲೇ ಎಲ್ಲ ಬ್ಯಾಂಕ್ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಲಾಗಿದೆ. ಸಾಲ ಪಡೆದುಕೊಂಡ ಬೀದಿ ವ್ಯಾಪಾರಿಗಳು ತಪ್ಪದೇ ಸಾಲ ಮರು ಪಾವತಿ ಮಾಡಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‌ಬಿಐ ಪ್ರಾದೇಶಿಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ದೀಪಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಅಲೋಕ್, ಜಿ¯್ಲÁ ಕೌಶಲ ಮಿಷನ್ ಸಹಾಯಕ ನಿರ್ದೇಶಕ ಬಸಪ್ಪ ತಳವಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಾದ ರಜನಿಕಾಂತ ಶೃಂಗೇರಿ, ವಿಠೋಬ್, ವಿಜಯಕುಮಾರ ಪಾಟೀಲï, ಜ್ಯೋತಿಕುಮಾರಿ, ಸಮುದಾಯ ಸಂಘಟಕ ಭೀಮಣ್ಣ ಹಾಗೂ ಬೀದಿ ವ್ಯಾಪಾರಿಗಳು ಭಾಗವಹಿಸಿದ್ದರು.