ಆತ್ಮವಿಶ್ವಾಸ ರೂಢಿಸಿಕೊಂಡರೆ ಗೆಲುವು ಖಚಿತ

ಆತ್ಮವಿಶ್ವಾಸ ರೂಢಿಸಿಕೊಂಡರೆ ಗೆಲುವು ಖಚಿತ
ಶನಿವಾರಸಂತೆ ಭಾರತೀ ಪ್ರಥಮ ದರ್ಜೆ ಕಾಲೇಜಿನ ಕಿರಿಯ ವಿದ್ಯಾರ್ಥಿಗಳು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪನ್ಯಾಸಕ ಗಣಪತಿ ಭಟ್, ಪ್ರಾಂಶುಪಾಲ ಇ.ಎಂ.ದಯಾನಂದ್, ಎನ್ನೆಸ್ಸೆಸ್ ಅಧಿಕಾರಿ ಹರೀಶ್ ಇತರರು ಇದ್ದರು.
Published on

ಶನಿವಾರಸಂತೆ: ವಿದ್ಯಾರ್ಥಿಗಳು ಆತ್ಮವಿಶ್ವಾಸ ರೂಢಿಸಿಕೊಂಡರೆ ಗೆಲುವು ಖಚಿತ ಎಂದು ಆಲೂರು ಸಿದ್ದಾಪುರ ಸರ್ಕಾರಿ ಪ.ಪೂ.ಕಾಲೇಜಿನ ಹಿರಿಯ ಉಪನ್ಯಾಸಕ ಗಣಪತಿ ಭಟ್ ಹೇಳಿದರು. ಭಾರತೀ ಪ್ರಥಮ ದರ್ಜೆ ಕಾಲೇಜಿನ ಕಿರಿಯ ವಿದ್ಯಾರ್ಥಿಗಳು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ದಿಸೆಯಲ್ಲಿ ಪುಸ್ತಕವನ್ನು ತಲೆ ತಗ್ಗಿಸಿ ಓದಿ ಅಭ್ಯಾಸ ಮಾಡಿದರೆ ಮುಂದೆ ಸಮಾಜದಲ್ಲಿ ತಲೆ ಎತ್ತಿ ನಡೆಯಬಹುದು ಎಂದು ಸಲಹೆ ನೀಡಿದರು.
ಎನ್ನೆಸ್ಸೆಸ್ ಅಧಿಕಾರಿ ಹರೀಶ್ ಮಾತನಾಡಿದರು. ಉಪನ್ಯಾಸಕ ಎಚ್.ಎಂ.ವಿವೇಕ್, ಪ್ರಾಂಶುಪಾಲ ಇ.ಎಂ.ದಯಾನಂದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net