ಆತ್ಮವಿಶ್ವಾಸವೇ ಸಾಧನೆಗೆ ಮೈಲಿಗಲ್ಲು

19Ckd3
Published on

ಚಿಕ್ಕೋಡಿ: ವಿದ್ಯಾರ್ಥಿಗಳು ಜೀವನದಲ್ಲಿ ಬರುವ ಸವಾಲು ಆತ್ಮವಿಶ್ವಾಸದಿಂದ ಎದುರಿಸಿದರೆ, ಸಾಧನೆಯ ಮೈಲುಗಲ್ಲು ತಲುಪಬಹುದು ಎಂದು ಪಿಎಸ್‌ಐ ಬಸಗೌಡ ನೇರ್ಲಿ ಹೇಳಿದರು.

ಇಲ್ಲಿನ ಸಿಎಲ್‌ಇ ಸಂಸ್ಥೆಯ ಕೆ.ಕೆ ಸಿಬಿಎಸಿ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪದವಿ ಪ್ರಧಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಸಿಎಲ್‌ಇ ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ(ಅಜಯ)ಕವಟಗಿಮಠ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಜವಾಬ್ದಾರಿ ಸದುಪಯೋಗಪಡಿಸಿಕೊಂಡು ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ತಿಳಿಸಿದರು.

ಶಾಲೆಯ ಪ್ರಾಚಾರ್ಯೆ ಸ್ಮೀತಾ ಶಿಂಧೆ ಪ್ರತಿಜ್ಞಾವಿಧಿ ಬೋಧಿಸಿದರು. ಶಾಲೆಯ ಶೌರ್ಯ, ಧನುಷ, ಪೃಥ್ವಿ ಪ್ರಹಾರ ತಂಡಗಳ ನಾಯಕ, ಉಪನಾಯಕರಿಗೆ ಹಾಗೂ ಸಾಂಸ್ಕೃತಿಕ, ಕ್ರೀಡೆ, ಶಿಸ್ತು , ಪ್ರಾರ್ಥನಾ ವಿಭಾಗದ ನಾಯಕ ಉಪನಾಯಕರಿಗೆ ಮತ್ತು ಶಾಲೆಯ ಬಾಲಕರ ಜಿಎಸ್ ಶ್ರೀಧರ ಪಾಟೀಲ, ಬಾಲಕಿಯರ ಜಿಎಸ್ ಅನನ್ಯಾ ಬಿಸ್ಕೋಪ್ ಅವರಿಗೆ ಪದವಿ ಪ್ರಧಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net