ಆತ್ಮಹತ್ಯೆ ತಡೆಗೆ ಜಾಗೃತಿ ಅವಶ್ಯ

12Anand4
Published on

ಬೆಳಗಾವಿ: ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿದ್ದು, ಇದನ್ನು ತಡೆಯಲು ಜಾಗೃತಿ ಮೂಡಿಸುವುದು ಅವಶ್ಯ ಎಂದು ಹಿರಿಯ ನ್ಯಾಯಾಧೀಶ ಸಂದೀಪ ಪಾಟೀಲ ಹೇಳಿದರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಈಚೆಗೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾನಸಿಕ ಖಿನ್ನತೆ, ಒತ್ತಡದಿಂದ ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಗೀತಾ ಕಾಂಬಳೆ ಪ್ರಾಸ್ತಾವಿಕ ಮಾತನಾಡಿ, ಸಣ್ಣ-ಪುಟ್ಟ ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆಗೆ ಮುಂದಾಗಬಾರದು. ಜೀವನದಲ್ಲಿ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಬೇಕು ಎಂದರು.

ಪ್ರಾಚಾರ್ಯ ಪ್ರೊ.ಎಸ್.ಸಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅಬಕಾರಿ ಇಲಖೆ ಉಪ ಆಯುಕ್ತೆ ವನಜಾಕ್ಷಿ ಎಂ. ಮನೋವೈದ್ಯ ಡಾ. ಸುಮಿತಕುಮಾರ ದುರಗೋಜಿ, ಡಾ.ಸುಶೀಲಾ ಸಾಯಣ್ಣವರ, ಡಾ.ಅರ್ಜುನ ಜಂಬಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net