ಆದಿಚುಂಚನಗಿರಿ ಕ್ಷೇತ್ರದಲ್ಲಿ ಎಲ್ಲರಿಗೂ ಆದ್ಯತೆ

15_09_Mdy_02(Okkaligara Sanga)
Published on

ಮಂಡ್ಯ: ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಎಲ್ಲ ಸಮುದಾಯದವರಿಗೂ ಆದ್ಯತೆ ನೀಡಲಾಗಿದೆ ಎಂದು ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಂದನಾಥ ಸ್ವಾಮೀಜಿ ಹೇಳಿದರು.

ನಗರದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ಒಕ್ಕಲಿಗರ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಆಯೋಜಿಸಿದ್ದ 8ನೇ ವಾರ್ಷಿಕೋತ್ಸವ, ಅಭಿನಂದನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇವಲ ಒಂದು ಸಮುದಾಯಕ್ಕೆ ಮೀಸಲು ಎಂಬಂತೆ ಶ್ರೀಕ್ಷೇತ್ರವು ನಡೆದುಕೊಂಡಿಲ್ಲ. ಎಲ್ಲ ಸಮುದಾಯದವರಿಗೂ ಪ್ರಾತಿನಿಧ್ಯ ನೀಡುವ ಮೂಲಕ ಹೆಸರು ಪಡೆದುಕೊಂಡಿದೆ ಎಂದರು.

ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಮಾತನಾಡಿ, ವಿದ್ಯಾರ್ಥಿಗಳು ದೊಡ್ಡ ಕನಸು ಇಟ್ಟುಕೊಂಡು ಅಧ್ಯಯನದಲ್ಲಿ ತೊಡಗಬೇಕು. ಪ್ರತಿಭಾವಂತ ಮಕ್ಕಳು ಇನ್ನಷ್ಟು ಸಾಧನೆ ಮಾಡುವ ಗುರಿ ಹೊಂದಬೇಕು. ಅದಕ್ಕೆ ತಕ್ಕಂತೆ ಕಠಿಣ ಶ್ರಮವಿಟ್ಟು ಓದಬೇಕು. ಆಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯಎಂದು ಸಲಹೆ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಮಾತನಾಡಿ, ಕೆಂಪೇಗೌಡ ಕಾಲೇಜು ಮತ್ತು ಮೆಡಿಕಲ್ ಕಾಲೇಜು ಸೇರಿದಂತೆ ಆರೋಗ್ಯ ಸೇವೆಯನ್ನು ಪ್ರತಿಯೊಂದು ಸಮುದಾಯಕ್ಕೆ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಂಗೇಗೌಡ, ಒಕ್ಕಲಿಗರ ಸಂಘದ ನಿರ್ದೇಶಕ ರಾಘವೇಂದ್ರ, ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್, ನಿರ್ದೇಶಕರಾದ ಸೋಮಶೇಖರ್, ಅಂಜನಾ ಶ್ರೀಕಾಂತ್, ರವೀಂದ್ರ, ಮುಖಂಡರಾದ ಬೋರೇಗೌಡ, ಶಿವಲಿಂಗಯ್ಯ, ಪದ್ಮಾ ಮೋಹನ್, ಸುಜಾತಾ ಕೃಷ್ಣ, ಬೋರೇಗೌಡ, ನ.ಲಿ.ಕೃಷ್ಣ, ರವೀಂದ್ರ, ಟ್ರಸ್ಟ್‌ನ ಅಧ್ಯಕ್ಷ ನಾಗಣ್ಣ ಬಾಣಸವಾಡಿ, ಎಲ್.ಕೃಷ್ಣ, ಬಸವೇಗೌಡ ಇತರರಿದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮುದಾಯದ ಅಧಿಕಾರಿಗಳು, ಸಹಕಾರ ಸಂಘಕ್ಕೆ ಆಯ್ಕೆಯಾಗಿರುವವರನ್ನು ಅಭಿನಂದಿಸಲಾಯಿತು. ಸಂಘದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net