ಆಧಾರ ನೋಂದಣಿಗೆ ವಿಶೇಷ ಅಭಿಯಾನ

bkt-11-13
ಬಾಗಲಕೋಟೆ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಽಕಾರಿ ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಆಧಾರ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು. ಜಿಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ಧಾರ್ಥ ಗೋಯಲ್ ಮತ್ತಿತರ ಅಽಕಾರಿಗಳು ಇದ್ದರು.
Published on

ಬಾಗಲಕೋಟೆ: ಜಿಲ್ಲೆಯಲ್ಲಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿರುವ ಮಕ್ಕಳ ಆಧಾರ ನೋಂದಣಿಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಜಿಲ್ಲಾಽಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಽಕಾರಿ ಕಚೇರಿಯಲ್ಲಿ ಸೋಮವಾರ ಜರುಗಿದ ಜಿಲ್ಲಾ ಮಟ್ಟದ ಆಧಾರ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗು ಆಧಾರ ಕಾರ್ಡ ಹೊಂದುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಯೊಂದು ಶಾಲೆಗಳಲ್ಲಿ ಅಭಿಯಾನ ಹಮ್ಮಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ರೂಟ್ ಮ್ಯಾಪ್ ಹಾಕಿಕೊಳ್ಳಲು ಸೂಚನೆ ನೀಡಿದರು.

ಹೊಸದಾಗಿ ಆಧಾರ ನೋಂದಣಿ, ಲಿಂಗ, ಜನ್ಮ ದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆಗಳ ಸರಿಪಡಿಸುವಿಕೆ, ನವೀಕರಣಕ್ಕೆ ಸಂಬAಧಪಟ್ಟ ಸಮಸ್ಯೆಗಳನ್ನು ಸರಿಪಡಿಸಲು ಸರ್ಕಾರ ನಿಗದಿಪಡಿಸಿದ ಶುಲ್ಕವನ್ನು ಮಾತ್ರ ಪಡೆದುಕೊಳ್ಳತಕ್ಕದ್ದು. ನಿಗದಿತ ಹಣಕ್ಕಿಂತ ಹೆಚ್ಚಿನ ಹಣ ಪಡೆದಿರುವುದು ಕಂಡುಬAದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

೫ ರಿಂದ ೭ ವರ್ಷ ಹಾಗೂ ೧೫ ರಿಂದ ೧೭ ವರ್ಷದೊಳಗಿನವರಿಗೆ ಒಂದು ಬಾರಿಗೆ ಉಚಿತವಾಗಿ ನವೀಕರಣಕ್ಕೆ ಅವಕಾಶವಿದೆ. ಇಲ್ಲದಿದ್ದಲ್ಲಿ ೧೦೦ ರೂ.ಗಳನ್ನು ನೀಡಬೇಕಾಗುತ್ತದೆ ಎಂದರು.

ಬಯೋಮೆಟ್ರಿಕ್ ನವೀಕರಣ ಸಮಯದಲ್ಲಿ ಮಾಡಿದರೆ ಉಚಿತವಾಗಿದ್ದು, ಪ್ರತ್ಯೇಕವಾಗಿ ೫೦ ರೂ. ಶುಲ್ಕವಿರುತ್ತದೆ. ಮೈ ಆಧಾರ ಪೋರ್ಟಲ್‌ನಲ್ಲಿ ಜೂನ್ ೧೪, ೨೦೨೬ ವರೆಗೆ ಉಚಿತವಾಗಿದೆ. ಆಧಾರ ಕೇಂದ್ರದಲ್ಲಿ ಮಾತ್ರ ೫೦ ರೂ.ಶುಲ್ಕ ಪಾವತಿಸಿ ನವೀಕರಣ ಮಾಡಿಕೊಳ್ಳಬಹುದಾಗಿದೆ. ನಕಲಿ ಆಧಾರ ಕಾರ್ಡ ಕಂಡುಬAದಲ್ಲಿ ತಕ್ಷಣ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಮಾಹಿತಿ ನೀಡಬೇಕೆಂದು ಜಿಲ್ಲಾಽಕಾರಿಗಳು ಹೇಳಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿ, ಆಧಾರ ನವೀಕರಣದ ಬಗ್ಗೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪೊಸ್ಟರ, ಕರಪತ್ರ ಹಂಚುವ ಮೂಲಕ ಅರಿವು ಮೂಡಿಸುವ ಕೆಲಸವಾಗಬೇಕು. ಅಂದಾಗ ಮಾತ್ರ ಆಧಾರ ನವೀಕರಣಕ್ಕೆ ಜನ ಮುಂದಾಗುತ್ತಾರೆ ಎಂದು ತಿಳಿಸಿದರು.

ಯುಐಡಿಎಐನ ಸಹಾಯಕ ವ್ಯವಸ್ಥಾಪಕ ಡೆವಿಡ್ ಅವರು ಜಿಲ್ಲೆಯಲ್ಲಿ ಆಧಾರ ನೋಂದಣಿ ಕೇಂದ್ರಗಳು ೧೪೪ ಇದ್ದು, ೨೪,೦೮,೩೩೧ ಆಧಾರ ಕಾರ್ಡ ಜನರೇಟ್ ಮಾಡಲಾಗಿದೆ. ಇದರಲ್ಲಿ ೦ ದಿಂದ ೫ ವರ್ಷದ ೮೫,೩೯೩, ೫ ರಿಂದ ೧೮ ವರ್ಷದೊಳಗಿನ ೬,೯೦,೭೫೫ ಹಾಗೂ ೧೮ ವರ್ಷ ಮೇಲ್ಪಟ್ಟವರು ೧೬,೩೨,೧೮೩ ಜನರೇಟ ಆಗಿವೆ. ೨೨,೮೯,೫೧೭ ಆಧಾರ ಕಾರ್ಡಗೆ ಮೊಬೈಲ್ ಸಂಖ್ಯೆ ಲಿಂಕ್ ಮಾಡಲಾಗಿದೆ. ೧,೧೮,೮೧೪ ಮೊಬೈಲ್ ಲಿಂಕ್‌ಗೆ ಬಾಕಿ ಉಳಿದಿವೆ. ಜಿಲ್ಲೆಯ ೩,೭೬,೬೪೨ ವಿದ್ಯಾಥಿಗಳ ಪೈಕಿ ೩,೦೯,೧೩೪ ವಿದ್ಯಾರ್ಥಿಗಳ ಆಧಾರ ಕಾರ್ಡ ಪರಿಶೀಲನೆಗೆ ಕಳುಹಿಸಿದ್ದು, ಆ ಪೈಕಿ ೨,೩೫,೯೯೦ ಆಧಾರ ಕಾರ್ಡ ಪೂರ್ಣಗೊಂಡಿವೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಸಿದ್ದಾರ್ಥ ಗೋಯಲ್, ಶಾಲಾ ಶಿಕ್ಷಣ ಇಲಾಖೆಯ ಉಪ ಸಮನ್ವಯಾಽಕಾರಿ ಸಿ.ಆರ್.ಓಣಿ, ಅಂಚೆ ಕಚೇರಿಯ ಅಽÃಕ್ಷಕ ಹಸದಿ, ಜಿಲ್ಲಾ ಅಗ್ರಣಿ ಬ್ಯಾಂಕನ ವ್ಯವಸ್ಥಾಪಕ ರಾಜಶೇಖರ ಹೂಗಾರ, ಜಿಲ್ಲಾ ಆಧಾರ ಸಮಾಲೋಚಕ ಸಿದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net