ಆಧಾರ್ ತಿದ್ದುಪಡಿ ಕೇಂದ್ರಗಳ ಸಮಸ್ಯೆ ನಿವಾರಿಸಿ

5skp1
ಆಧಾರ್ ತಿದ್ದುಪಡಿ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಯುವ ಕಾಂಗ್ರೆಸ್ ಸದಸ್ಯರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ರಾಘವೇಂದ್ರ ನಾಯ್ಕ, ಸೈಯದ್ ಹುಸೇನ್, ಮಂಜು ನಾಯ್ಕ, ಚರಣ್ ಬನ್ನೂರು, ಸುನಿಲ್ ಸಿದ್ದು ಬಳ್ಳಿಗಾವಿ ಇತರರಿದ್ದರು.
Published on

ಶಿಕಾರಿಪುರ: ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಆಧಾರ್ ಕಾರ್ಡ್ ನೀಡುವ ನಿಟ್ಟಿನಲ್ಲಿ ತಿದ್ದುಪಡಿ ಮಾಡುವ ಕೇಂದ್ರಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ ಮಾತನಾಡಿ, ತಾಲೂಕಿನಲ್ಲಿ ಹೊಸ ಆಧಾರ್ ಕಾರ್ಡ್ ಮಾಡುವ ಮತ್ತು ತಿದ್ದುಪಡಿ ಮಾಡುವ ಕೇಂದ್ರಗಳು ಸರಿಯಾಗಿ ಕೆಲಸ ಮಾಡದೆ ಇರುವ ಪರಿಣಾಮದಿಂದ ಶಿಕಾರಿಪುರದ ವಿದ್ಯಾರ್ಥಿಗಳು, ನಾಗರಿಕರು ಬೆಳಗ್ಗೆ 4 ಗಂಟೆಗೆ ಬಂದು ಕ್ಯೂನಲ್ಲಿ ನಿಂತು ಕೆಲಸವಾಗದೆ ವಾಪಸ್ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಕಾಂಗ್ರೆಸ್ ನಗರ ಅಧ್ಯಕ್ಷ ಸೈಯದ್ ಹುಸೇನ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜು ನಾಯ್ಕ, ಬ್ಲಾಕ್ ಉಪಾಧ್ಯಕ್ಷ ಚರಣ್ ಬನ್ನೂರು, ಸುನೀಲ್, ಯುವ ಕಾಂಗ್ರೆಸ್ ಮುಖಂಡ ಸಿದ್ದು ಬಳ್ಳಿಗಾವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net