ಆನೆ ದಾಳಿಯಿಂದ ಪಾರಾದ ವ್ಯಕ್ತಿ

Published on

ಚಾಮರಾಜನಗರ: ತಾಲೂಕಿನ ಕಾಡಾಂಚಿನಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲೂಕಿನ ಕಾಳಿಕಾಂಬ ಕಾಲೋನಿಯ ನಿವಾಸಿ ಮಹದೇವೇಗೌಡ ಕಾಡಾನೆ ದಾಳಿಗೆ ಒಳಗಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಇವರು ಕಾಳಿಕಾಂಬ ಕಾಲೋನಿಯ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಗುರವಾರ ರಾತ್ರಿ 8 ಗಂಟೆಯ ಸಮಯದಲ್ಲಿ ವಾಪಸ್ಸಾಗುವಾಗ ಎದುರಿಗೆ ಬಂದ ಕಾಡಾನೆ ದಾಳಿ ನಡೆಸಿದೆ.

ನಂತರ ಕಾಡಾನೆ ಕಾಡಿನೊಳಗೆ ತೆರಳಿದ್ದು, ಗಾಯಗೊಂಡ ಮಹದೇವೇಗೌಡ ಅವರು ಹೇಗೋ ಗ್ರಾಮಕ್ಕೆ ಬಂದು ವಿಷಯ ತಿಳಿಸಿದ್ದಾರೆ. ಗ್ರಾಮಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿಗಳು ಗಾಯಾಳುವನ್ನು ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net