ಆನ್ ಲೈನ್ ಮೂಲಕ ಸದಸ್ಯತ್ವ ಅಭಿಯಾನ

IMG_20250201_132721
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.58055556, 0.17629167);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 46;
Published on

ಚಾಮರಾಜನಗರ: ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಗೆ ಹೆಚ್ಚಿನ ಸದಸ್ಯರನ್ನು ನೋಂದಾವಣೆ ಮಾಡುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದ ಸಮೀಪದಲ್ಲಿರುವ ಪರಿವರ್ತನ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಸಮಿತಿಯ ಸೂಚನೆಯಂತೆ ಈ ವರ್ಷದಲ್ಲಿ ಸಮಿತಿಗೆ ಹೆಚ್ಚಿನ ನೌಕರರನ್ನು ನೋಂದವಣಿ ಮಾಡಬೇಕಿದೆ. ಮುಂಬರುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ರಾಜ್ಯಸಮಿತಿ ಸೂಚನೆಯಂತೆ ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಸಮಿತಿಯ ಪದಾಧಿಕಾರಿಗಳು ಹೆಚ್ಚಿನ ಸಹಕಾರ ನೀಡಬೇಕೆಂದು ತಿಳಿಸಿದರು.

ಸಭೆಯಲ್ಲಿ ಎಸ್ಸಿ, ಎಸ್ಟಿ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ಎ.ಶಿವಣ್ಣ, ಉಪಾಧ್ಯಕ್ಷ ಶಿವಮೂರ್ತಿ, ಲೆಕ್ಕ ಪರಿಶೋಧಕ ಮಲ್ಲಿಕಾರ್ಜುನ್, ಪದಾಧಿಕಾರಿಗಳಾದ ನಂಜುಂಡಸ್ವಾಮಿ, ನಟರಾಜ್, ಕೆಂಪನಪುರ ಮಹೇಶ್, ಮಹೇಶ್, ರವಿಕುಮಾರ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net