ಆನ್‌ಲೈನ್ ಕೆಲಸದ ಒತ್ತಡ ತಗ್ಗಿಸಿ

MAR 25-HRP-01
Published on

ಹರಪನಹಳ್ಳಿ: ಆನ್‌ಲೈನ್ ಕೆಲಸದ ಒತ್ತಡದಿಂದ ಮಕ್ಕಳಿಗೆ ಸರಿಯಾಗಿ ಪಾಠ ಬೋಧನೆ ಮಾಡಲು ಆಗುತ್ತಿಲ್ಲವೆಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ಲತಾ ಟಿ.ಎಚ್‌ಎಂ ಹೇಳಿದರು.

ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಾಠ ಬೋಧನೆ ಮಾಡುವುದಕ್ಕಿಂತ ನಿತ್ಯ ಆನ್‌ಲೈನ್ ಮೂಲಕ ಮಕ್ಕಳಿಗೆ ಸಂಬಂಧಿಸದ ಡೇಟಾ ಭರ್ತಿ ಮಾಡುವ ಕೆಲಸವೇ ಹೆಚ್ಚಾಗಿದೆ. ಇದರಿಂದ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಕ್ಕಳಿಗೆ ಪಾಠ ಬೋಧನೆ ಮಾಡಲು ಅನುಕೂಲ ಮಾಡಿಕೊಡಬೇಕು. ಆನ್‌ಲೈನ್ ಕೆಲಸದ ಒತ್ತಡ ಕಡಿಮೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net