ಆಬಲವಾಡಿ ಕಬ್ಬು ಬೆಳೆಗಾರರ ಪ್ರತಿಭಟನೆ

30M.D.R.4
Published on

ಮದ್ದೂರು: ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಹಾಗೂ ಕಬ್ಬು ಕಟಾವು ಕೂಲಿ ನಿಯಂತ್ರಿಸುವಂತೆ ಒತ್ತಾಯಿಸಿ ಶುಕ್ರವಾರ ಆಬಲವಾಡಿ ಗ್ರಾಮದ ಕಬ್ಬು ಬೆಳೆಗಾರರು ತಾಲೂಕಿನ ಕೊಪ್ಪದ ಎನ್‌ಎಸ್‌ಎಲ್ ಕಾರ್ಖಾನೆ ಮುಂಭಾಗದ ಗೇಟಿಗೆ ಬೀಗ ಹಾಕಿ ಜಡಿದು ಪ್ರತಿಭಟನೆ ಮಾಡಿದರು.

ರೈತ ಮುಖಂಡ ಆಬಲವಾಡಿ ಗ್ರಾಮದ ಶಿವರಾಮ ಮಾತನಾಡಿ, ಕೊಪ್ಪ ಹೋಬಳಿಯ ಆಬಲವಾಡಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಕಬ್ಬು ಕಟಾವಿಗೆ ಬಂದಿದೆ. ಆದರೆ ಎನ್‌ಎಸ್‌ಎಲ್, ಕಾರ್ಖಾನೆಯವರು ಕಟಾವಿಗೆ ಗಮನಹರಿಸುತ್ತಿಲ್ಲ. ಇದರಿಂದ ರೈತರು ನಷ್ಟ ಅನುಭವಿಸುವ ಆತಂಕದಲ್ಲಿದ್ದಾರೆ. ಹೀಗಾಗಿ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ವಿಭಾಗದ ಸೀನಿಯರ್ ಮ್ಯಾನೇಜರ್ ಸೆಲ್ವಿರಾಜ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಶನಿವಾರದಿಂದ ಹೆಚ್ಚಿನ ಕೂಲಿಕಾರರನ್ನು ಕಟಾವು ಮಾಡಲು ಬಿಡಲಾಗುವುದು. ಕೂಲಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net