ಆಬಲವಾಡಿ ಗ್ರಾಪಂಗೆ ಆರ್.ಸುರೇಶ್ ಅಧ್ಯಕ್ಷ

oppo_2
oppo_2
Published on

ಮದ್ದೂರು: ತಾಲೂಕಿನ ಆಬಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸತತ ಎರಡನೇ ಬಾರಿಗೆೆ ಜೆಡಿಎಸ್ ಬೆಂಬಲಿತ ಆರ್.ಸುರೇಶ್ ಅವಿರೋಧವಾಗಿ ಆಯ್ಕೆಯಾದರು.

ಬಿ.ಎಂ.ಪವಿತ್ರಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಪಂಚಾಯಿತಿ ಸಂಭಾಗಣದಲ್ಲಿ ಚುನಾವಣೆ ನಿಗದಿಯಾಗಿತ್ತು. ಆರ್.ಸುರೇಶ್ ಅವರನ್ನು ಹೊರತುಪಡಿಸಿ ಬೇರ‌್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ತಾಪಂ ಇಒ ರಾಮಲಿಂಗಯ್ಯ ಅವಿರೋಧ ಆಯ್ಕೆ ಘೋಷಿಸಿದರು.

ನೂತನ ಅಧ್ಯಕ್ಷ ಆರ್.ಸುರೇಶ್ ಮಾತನಾಡಿ, ಎಲ್ಲ ಸದಸ್ಯರ ಸಹಕಾರದಿಂದ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಮೊದಲ ಬಾರಿಗೆ ಅಧ್ಯಕ್ಷನಾಗಿದ್ದ ಸಮಯದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪಂಚಾಯಿತಿ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೆ. ಮುಂದೆಯೂ ಕೂಡ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುತ್ತೇನೆ. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೆನೆ ಎಂದರು.

ನಾನು ಗ್ರಾಪಂ ಅಧ್ಯಕ್ಷನಾಗಲು ಸಹಕಾರ ನೀಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಶಾಸಕರಾದ ಸುರೇಶ್‌ಗೌಡ, ಕೆ.ಟಿ.ಶ್ರೀಕಂಠೇಗೌಡ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಗ್ರಾಪಂ ಉಪಾಧ್ಯಕ್ಷೆ ಚುಂಚಮ್ಮ, ಸದಸ್ಯರಾದ ನರಸಿಂಹಾಚಾರ್, ಎಸ್.ಸಾಗರ್, ಎಚ್.ಎನ್.ಸತ್ಯವತಿ, ಸತೀಶ, ಕೆ.ಪುಷ್ಪಾ, ದೇವರಾಜು, ಮುಖಂಡರಾದ ರವೀಂದ್ರ, ವೀರಣ್ಣ, ರಾಮಲಿಂಗಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net