ಆಮಿಷಕ್ಕೆ ಒಳಗಾಗದೆ ಮತದಾನ ಮಾಡಿ: ಜಿಪಂ ಸಿಇಒ ಮನವಿ

ಆಮಿಷಕ್ಕೆ ಒಳಗಾಗದೆ ಮತದಾನ ಮಾಡಿ: ಜಿಪಂ ಸಿಇಒ ಮನವಿ
Published on

ಹಾಸನ : ಮತದಾನ ನಮ್ಮೆಲ್ಲರ ಹಕ್ಕಾಗಿದ್ದು, ಯಾವುದೇ ಆಸೆ- ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಗುರುವಾರ ಭಾರತ್ ಸ್ಕೌಟ್ ಆಂಡ್ ಗೈಡ್ಸ್, ಏಕಲವ್ಯ ರೋಟರಿ ಮುಕ್ತ ದಳ ಹಾಸನ ವತಿಯಿಂದ ಮತದಾನ ಜಾಗೃತಿ ಮೂಡಿಸುವ ಸೈಕಲ್ ಜಾಥಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಸೈಕಲ್ ಜಾಥವೂ ಜಿಲ್ಲೆಯಾದ್ಯಂತ 400 ಕಿಲೋ ಮೀಟರ್‌ಗಳಿಗೂ ಹೆಚ್ಚು ದೂರ ಕ್ರಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.

ಜಾಥದಲ್ಲಿ ಸುಮಾರು 40ಕ್ಕೂ ಭಾರತ್ ಸ್ಕೌಟ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಸಂಚರಿಸಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಗ್ರಾಮೀಣ ಭಾಗಗಳಿಗಿಂತ ನಗರ ಪ್ರದೇಶಗಳಲ್ಲಿ ಕಡಿಮೆ ಮತದಾನವಾಗುತ್ತಿದ್ದು ನಗರ ಪ್ರದೇಶಗಳಲ್ಲಿ ಶೇಕಡ 100ರಷ್ಟು ಮತದಾನ ಮಾಡುವಂತೆ ಹೆಚ್ಚಿನ ಅರಿವು ಮೂಡಿಸಿ ಎಂದು ಅವರು ಹೇಳಿದರು.

ಮತದಾನ ಮಾಡುವ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಿ ದೇಶದ ಪ್ರಗತಿಗೆ ಸಹಕರಿಸಬೇಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್. ಪೂರ್ಣಿಮ ರವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಚಂದ್ರಶೇಖರ್, ಭಾರತ್ ಸ್ಕೌಟ್ ಆಂಡ್ ಗೈಡ್ಸ್ ಏಕಲವ್ಯ ಓಪನ್ ಗ್ರೂಪ್ ಮುಖ್ಯಸ್ಥ ಆರ್.ಜಿ. ಗಿರೀಶ್, ಹಾಗೂ ಭಾರತ್ ಸ್ಕೌಟ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net