

ಬನ್ನಿಕುಪ್ಪೆ
ಹುಣಸೂರು ತಾಲೂಕು ಪಂಚಾಯಿತಿ ಸ್ವೀಪ್ ವತಿಯಿಂದ ಬನ್ನಿಕುಪ್ಪೆ ಮಾರಿಗುಡಿ ಆವರಣದಲ್ಲಿ ಶನಿವಾರ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಮಾತನಾಡಿ, ಮತದಾರರು ಚುನಾವಣೆ ವೇಳೆಯಲ್ಲಿ ಆಮಿಷಗಳಿಗೆ ಒಳಗಾಗದೆ ನಿರ್ಭಯವಾಗಿ ನಿಮ್ಮ ಹಕ್ಕು ಚಲಾಯಿಸಿ, ಚುನಾವಣಾ ಅಕ್ರಮ ಕಂಡುಬಂದಲ್ಲಿ ಸಿವಿಲ್ ಆ್ಯಪ್ ಮೂಲಕ ಮಾಹಿತಿ ನೀಡಿ ಎಂದು ಮನವಿ ಮಾಡಿದರು.
ಪಿಡಿಒ ರಾಘವೇಂದ್ರ ಪ್ರಸನ್ನ ಅವರ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಜಾಥಾ ನಡೆಸಿ ನಾಗರಿಕರಲ್ಲಿ ಅರಿವು ಮೂಡಿಸಲಾಯಿತು. ಗ್ರಾಮ ಪಂಚಾಯಿತಿ ಸಿಬ್ಬಂದಿ ಎನ್‌ಆರ್‌ಎಲ್‌ಎಂ ತಾಲೂಕು ಸಂಯೋಜಕಿ ಮಂಜುಳಾ, ಪರಿಹತ್ ಭಾನು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.