ಆಮ್ಲಜನಕ ಪೂರೈಕೆ ಹೆಚ್ಚಿಸಲು ಕ್ರಮ - ಶಾಸಕ ಅಭಯ ಪಾಟೀಲ

abhay patil
Published on

ಬೆಳಗಾವಿ: ಆಮ್ಲಜನಕ ಪೂರೈಕೆಯ ಉಸ್ತುವಾರಿ ವಹಿಸಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಅವರೊಂದಿಗೆ ಚರ್ಚಿಸಿ ಬೆಳಗಾವಿ ಜಿಲ್ಲೆಗೆ ವೈದ್ಯಕೀಯ ಆಮ್ಲಜನಕ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದರು.

ಜಿಲ್ಲೆಯ ಹಿತದೃಷ್ಟಿಯಿಂದ ಹಲವು ವಿಷಯಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದೇನೆ. ಆಮ್ಲಜನಕ ಪೂರೈಕೆಯಲ್ಲಿ ತಾರತಮ್ಯವಾದರೆ, ನಮ್ಮ ಜನರ ಪರವಾಗಿ ಧ್ವನಿ ಎತ್ತುವುದರಲ್ಲಿ ಮೊದಲಿರುತ್ತೇನೆ. ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ಪ್ರಮಾಣ ಕಡಿಮೆ ಮಾಡುವುದು ಸರಿಯಲ್ಲ. ರೆಮ್‌ಡಿಸಿವಿರ್ ಮತ್ತು ಆಮ್ಲಜನಕ ಪೂರೈಕೆ ವ್ಯವಸ್ಥೆ ಸುಧಾರಿಸಿದೆ.

ಅಗತ್ಯ ಇರುವವರಿಗೂ ಔಷಧ ಲಭಿಸುತ್ತಿಲ್ಲ ಎಂಬ ದೂರು ಬಂದಲ್ಲಿ ತಕ್ಷಣವೇ ಸರಿಪಡಿಸಲಾಗುತ್ತಿದೆ. ಆದರೂ ಆ ಚುಚ್ಚುಮದ್ದನ್ನು ಯಾರ ಹೆಸರಲ್ಲಿ ಕೊಡಲಾಗಿದೆ. ಅದು ನಿಗದಿತ ವ್ಯಕ್ತಿಗೆ ತಲುಪಿದೆಯೇ ಎನ್ನುವುದನ್ನು ಪರಿಶೀಲಿಸಿ ವರದಿ ಕೊಡುವಂತೆ ಸೂಚಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net