ಆಯುರ್ವೆದ ಔಷಧ ಹೆಚ್ಚು ವಿತರಿಸಿ

6 smg 2
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯುಷ್ ಇಲಾಖೆ ಔಷಧಗಳ ಮೂಲಕ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ ನೀಡಿದರು.

ಸೋಮವಾರ ಆಯುಷ್ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದ ಅವರು, ಆಯುಷ್ ಇಲಾಖೆಯಲ್ಲಿ ಲಭ್ಯವಿರುವ ಔಷಧಗಳು ಜನ ಸಾಮಾನ್ಯರಿಗೆ ದೊರೆಯುವಂತೆ ನೋಡಿಕೊಳ್ಳಿ ಎಂದು ಹೇಳಿದರು.

ಆಯುರ್ವೆದ ಔಷಧಗಳು ಕರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂಬುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇದರ ವಿತರಣೆ ಅವಶ್ಯಕ. ಲಭ್ಯವಿರುವ ಔಷಧಗಳ ವಿತರಣೆ ಜತೆಗೆ ಹೆಚ್ಚುವರಿಯಾಗಿ ಔಷಧ ತರಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಪುಷ್ಪಾ ಮಾತನಾಡಿ, ಈಗಾಗಲೇ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೂ ಸೇರಿ ಕರೊನಾ ವಾರಿಯರ್ಸ್​ಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ರೋಗ ನಿರೋಧಕ ಔಷಧಗಳನ್ನು ವಿತರಿಸಲಾಗಿದೆ. ವಿವಿಧ ಹಂತಗಳಲ್ಲಿ ಇದನ್ನು ಕಾರ್ಯಗತಗೊಳಿಸಲಾಗುವುದು ಎಂದರು. ಆಯುಷ್ ವೈದ್ಯರಾದ ಡಾ. ವೀರಣ್ಣ, ಡಾ. ಲಿಂಗರಾಜು, ಡಾ. ಕೊಟ್ರೇಶ್ ಇತರರಿದ್ದರು.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net