ಆಯುರ್ವೇದ ಆಸ್ಪತ್ರೆ ಸ್ಥಾಪನೆ

kp school
Published on

ಬೀದರ್: ನಗರದ ಕೆಪಿ ವಿದ್ಯಾ ಸಂಸ್ಥೆಯ ಕನ್ಯಕಾ ಪರಮೇಶ್ವರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ಸಂಸ್ಥೆ ಅಧ್ಯಕ್ಷರೂ ಆದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ವಾಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂಸ್ಥೆಯಿಂದ ಆಯುರ್ವೇದ ಆಸ್ಪತ್ರೆ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಎಂದರು.

ಸಂಸ್ಥೆ ಆಡಳಿತ ಮಂಡಳಿ ನೂತನ ಸದಸ್ಯರಾಗಿ ನೇಮಕಗೊಂಡ ಡಾ.ಸಂತೋಷ ಬಾಲೋಡೆ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆ ಉಪಾಧ್ಯಕ್ಷ ಮಲ್ಲಯ್ಯ ಸ್ವಾಮಿ, ಗೌರವ ಸದಸ್ಯ ಚಂದ್ರಶೇಖರ ಪಾಟೀಲ್ ಶ್ರೀಮಂಡಲ, ಪ್ರೌಢ ಶಾಲೆ ಮುಖ್ಯಗುರು ವಿಜಯಕುಮಾರ ಪಾಟೀಲ್ ಯರನಳ್ಳಿ, ಪ್ರಾಥಮಿಕ ಶಾಲೆ ಮುಖ್ಯ ಗುರು ಸುಲೋಚನಾ ಪಾಟೀಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರು ಪಾಟೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net