ಆಯುರ್ವೇದದಲ್ಲಿ ಎಲ್ಲಾ ಕಾಯಿಲೆಗಳಿಗೂ ಚಿಕಿತ್ಸೆ

free health camp
ಎನ್.ಆರ್.ಪುರ ಅಗ್ರಹಾರ ಶ್ರೀ ಉಮಾಮಹೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಡಾ.ಸುಹಾಸ್ ಮಾತನಾಡಿದರು. ಎಸ್.ಎಸ್.ಶಾಂತಕುಮಾರ್, ವಿದ್ಯಾನಂದ್, ಡಾ.ಅನುಷಾ ಇತರರಿದ್ದರು.
Published on

ಎನ್.ಆರ್.ಪುರ: ಆಯುರ್ವೇದ ಚಿಕಿತ್ಸೆಯಿಂದ ಯಾವುದೇ ರೋಗವನ್ನೂ ಕೂಡ ಸಂಪೂರ್ಣವಾಗಿ ಗುಣಮುಖ ಮಾಡಬಹುದು ಎಂದು ಸಿಂಸೆಯ ಪುನರ್ವಸು ಆಯುರ್ವೇದ ಚಿಕಿತ್ಸಾಲಯದ ಡಾ.ಸುಹಾಸ್ ಹೇಳಿದರು.

ಅಗ್ರಹಾರದ ಶ್ರೀ ಉಮಾಮಹೇಶ್ವರ ಸಮುದಾಯ ಭವನದಲ್ಲಿ ರೋಟರಿ ಸಂಸ್ಥೆ, ಇನ್ನರ್‌ವ್ಹೀಲ್ ಕ್ಲಬ್ ಹಾಗೂ ಸಿಂಸೆಯ ಪುನರ್ವಸು ಆಯುರ್ವೇದ ಚಿಕಿತ್ಸಾಲಯದ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಕೆಲವರಿಗೆ ಆಯುರ್ವೇದ ಚಿಕಿತ್ಸೆ ಬಗ್ಗೆ ತಪ್ಪುಕಲ್ಪನೆಗಳಿವೆ. ಆಯುರ್ವೇದಿಂದ ನಿಧಾನವಾಗಿ ಕಾಯಿಲೆ ಗುಣಮುಖವಾಗುತ್ತದೆ. ಅಲೋಪಥಿಯಿಂದ ಶೀಘ್ರ ಗುಣಮುಖವಾಗುತ್ತದೆ ಎಂಬ ಅಭಿಪ್ರಾಯವಿದೆ. ನಿಧಾನವಾದರೂ ಆಯುರ್ವೇದಿಂದ ಕಾಯಿಲೆ ಸಂಪೂರ್ಣ ಗುಣಮುಖವಾಗುತ್ತದೆ ಎಂದರು.
ರೋಟರಿ ಸಂಸ್ಥೆಯ ಖಜಾಂಚಿ ಎಸ್.ಎಸ್.ಶಾಂತಕುಮಾರ್ ಮಾತನಾಡಿ, ಪ್ರತಿ ವರ್ಷವೂ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗುತ್ತಿತ್ತು. ಆದರೆ ಇದೇ ಮೊದಲನೇ ಬಾರಿಗೆ ಆಯುರ್ವೇದ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಇಂದಿನ ಆಹಾರದ ಬೆಳೆಗಳು ಸಂಪೂರ್ಣವಾಗಿ ರಾಸಾಯನಿಕ ಗೊಬ್ಬರಗಳಿಂದ ಬೆಳೆದ ಬೆಳೆಗಳಾಗಿವೆ. ಇದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಬೀರುತ್ತಿವೆ. ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಶೀತ, ಕೆಮ್ಮು, ನೆಗಡಿ, ಮೈಕೈ ನೋವು, ಮೂಲವ್ಯಾಧಿ, ಸೀರೋಗ, ರಕ್ತಹೀನತೆ ಮುಂತಾದ ಕಾಯಿಲೆಗಳಿಗೆ ಉಚಿತ ತಪಾಸಣೆ ಹಾಗೂ ಔಷಧಗಳನ್ನು ನೀಡಲಾಯಿತು.
ರೋಟರಿ ಸಂಸ್ಥೆ ಅಧ್ಯಕ್ಷ ಕಿರಣ್, ಕಾರ್ಯದರ್ಶಿ ವಿದ್ಯಾನಂದ್, ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ರಶ್ಮಿ ದಯಾನಂದ್, ಪುನರ್ವಸು ಆಯುರ್ವೇದ ಚಿಕಿತ್ಸಾಲಯದ ಡಾ.ಅನುಷಾ, ಉಪನ್ಯಾಸಕಿ ಡಾ. ತೇಜಸ್ವಿನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net