

ಬೀದರ್: ಆಯುರ್ವೇದಿಕ್ ವೈದ್ಯಕೀಯ ಕಾಲೇಜುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಎಂದು ಬೀದರ್‍ನ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜು ಅಧ್ಯಕ್ಷ ಮುರಳಿಧರ ಎಕಲಾರಕರ್ ತಿಳಿಸಿದ್ದಾರೆ.
ತಾವು ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದ ಬೆಂಗಳೂರಿನಲ್ಲಿ ನಡೆದ ಶುಲ್ಕ ಹಾಗೂ ನಿಯಮಗಳಿಗೆ ಸಂಬಂಧಿಸಿದ ಕರ್ನಾಟಕ ಆಯುರ್ವೇದಿಕ್ ವೈದ್ಯಕೀಯ ಕಾಲೇಜುಗಳ ಒಕ್ಕೂಟದ ಸಭೆಯಲ್ಲಿ ಅವರು ಆಯುಷ್ ಇಲಾಖೆ ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದ್ದಾರೆ.
ಕಾಲೇಜುಗಳಿಗೆ ಅನಗತ್ಯವಾಗಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.