ಆರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ

geeta chidri
Published on

ಬೀದರ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರಗ ಜ್ಞಾನೇಂದ್ರ ಅವರು ತಕ್ಷಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಗೀತಾ ಪಂಡಿತರಾವ್ ಚಿದ್ರಿ ಒತ್ತಾಯಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರು ಗೃಹ ಸಚಿವ ಸೇರಿ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಮೈಬಣ್ಣದ ಬಗ್ಗೆ ಅವಹೇಳನ ಮಾಡಿರುವುದು ಅವರಿಗೆ ಶೋಭೆ ತರುವಂತಹದ್ದಲ್ಲ ಎಂದು ಹೇಳಿದ್ದಾರೆ.
ಮನುಷ್ಯನ ಬಣ್ಣದ ಬಗ್ಗೆ ಮಾತನಾಡುವುದು ಅಕ್ಷಮ್ಯ. ಆರಗ ಅವರು ಕೀಳುಮಟ್ಟದ ಹೇಳಿಕೆ ಮೂಲಕ ತಮ್ಮ ಅಲ್ಪಜ್ಞಾನ ಪ್ರದರ್ಶಿಸಿದ್ದಾರೆ. ಅವರು ಶಾಸಕರಾಗಿ ಮುಂದುವರಿಯಲು ಅರ್ಹರಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿಯವರು ಕೂಡಲೇ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net