ಆರಗ ಜ್ಞಾನೇಂದ್ರ ವಿರುದ್ಧ ಧರಣಿ : ಶಾಸಕ ಸ್ಥಾನದಿಂದ ವಜಾಗೊಳಿಸಲು ಎಆರ್‌ಕೆ ಒತ್ತಾಯ

07 yelandur 01
Published on

ಚಾಮರಾಜನಗರ: ಮಾಜಿ ಸಚಿವ ಆರಗ ಜ್ಞಾನೇಂದ್ರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಕೂಡಲೇ ಇವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಆಗ್ರಹಿಸಿದರು.

ಯಳಂದೂರು ಹಾಗೂ ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಪಟ್ಟಣದಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.


ಆರಗ ಜ್ಞಾನೇಂದ್ರ ಬಣ್ಣದಿಂದ ಜಾತಿ ಅಳಿದಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾದ ಖರ್ಗೆ ಹಾಗೂ ಈಶ್ವರ್‌ಖಂಡ್ರೆ ವಿರುದ್ಧ ಅಪಮಾನಕಾರಿ ಹೇಳಿಕೆ ನೀಡಿದ್ದಾರೆ. ಇದು ದೇಶದ ಪ್ರಜ್ಞಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಅಲ್ಲದೆ ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಬಿಜೆಪಿಯಲ್ಲಿ ಯಾವ ಸ್ಥಾನವಿದೆ ಎಂಬುದನ್ನು ಸಾಬೀತು ಮಾಡುವ ಮಾತುಗಳಾಗಿವೆ ಎಂದು ಕಿಡಿಕಾರಿದರು. ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ಶಾಸಕರಾದ ಎಸ್.ಜಯಣ್ಣ, ಜಿ.ಎನ್. ನಂಜುಂಡಸ್ವಾಮಿ ಮಾತನಾಡಿದರು.


ಮೆರವಣಿಗೆ : ಪಟ್ಟಣದ ನಾಡಮೇಗಲಮ್ಮ ದೇಗುಲದಿಂದ ರ‌್ಯಾಲಿಯಲ್ಲಿ ಹೊರಟ ಪ್ರತಿಭಟನಾಕಾರರು, ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು. ಕೆ.ಕೆ. ರಸ್ತೆಯ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ತಹಸೀಲ್ದಾರ್ ಶಿವರಾಜು ರವರಿಗೆ ನೀಡಿದರು.


ಪಪಂ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಮಂಜು, ಕೆ.ಮಲ್ಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ಚಂದ್ರು, ತೋಟೇಶ್, ಜಿಪಂ ಮಾಜಿ ಉಪಾಧ್ಯಕ್ಷೆ ಕೇತಮ್ಮ, ಮಾಂಬಳ್ಳಿ ನಂಜುಂಡಸ್ವಾಮಿ, ನಾಗರಾಜು, ವಡಗೆರೆ ದಾಸ್ ಬಂಗಾರು, ಮಾಂಬಳ್ಳಿ ನಂಜುಂಡಸ್ವಾಮಿ, ಗಂಗಾಮಣಿ ರೇವಣ್ಣ, ಸಿದ್ದರಾಜು, ಹೊನ್ನೂರು ರೇವಣ್ಣ, ಜೆ.ಶ್ರೀನಿವಾಸ್, ವೈ.ವಿ.ಉಮಾಶಂಕರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net