ಮಹಾರಾಷ್ಟ್ರ ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ವಹಿಸಲಾಗುತ್ತಿದೆ ರಾಜ್ಯದಲ್ಲಿ ಈಗಾಗಲೇ ಕೊರೊನಾ ಎರಡನೇ ಅಲೆಯ ಆತಂಕ ಎದುರಾಗಿದೆ.ಇದರಿಂದ ಪುನಃ ಲಾಕ್ ಡೌನ್ ಬಗ್ಗೆ ಇನ್ನೂ ಯಾವುದೇ ರೀತಿಯ ನಿರ್ಧಾರಮಾಡಿಲ್ಲ. ರಾಜ್ಯದಲ್ಲಿ ಕರೊನಾ ನಿರ್ವಹಣೆ ಅಚ್ಚುಕಟ್ಟಾಗಿದೆ. ರಾಜ್ಯದಲ್ಲಿ ಕೋವಿಡ್ ಕಾರಣದಿಂದ ಶಿಕ್ಷಣ ಇಲಾಖೆಗೆ ಅನುದಾನ ಅರ್ಥಕವಾಗಿ ಕಡಿಮೆ ಆಗಿದೆ ಎಂದು ಹೇಳಿದರು.
ಖಾಸಗಿ ಶಿಕ್ಷಣ ಸಂಸ್ಥೆಯವರು ಒಂದರಿಂದ ಐದನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ಹೈಕೋರ್ಟ್ ನಲ್ಲಿ ಚಾಲೆಂಜ್ ಮಾಡಿರುವುದರಿಂದ ಹೈಕೋರ್ಟ್ ನಲ್ಲಿ ಮಾ.24 ರಂದು ವಿಚಾರಣೆ ನಡೆಯಲಿದೆ ಎಂದು ನುಡಿದರು.
ಕೆಲವು ಖಾಸಗಿ ಶಾಲೆಯಲ್ಲಿ 1ರಿಂದ 5ರವರೆಗೆ ತರಗತಿ ಆರಂಭಿಸಿರುವ ಮಾಹಿತಿ ಬಂದಿದೆ ಅದ್ರ ಬಗ್ಗೆ ಕ್ರಮ ವಹಿಸುತ್ತೇವೆ. ಮಕ್ಕಳ ಯೋಗಕ್ಷೇಮಕ್ಕಾಗಿ ಸರ್ಕಾರ ಶೈಕ್ಷಣಿಕ ವರ್ಷ ಆರಂಭಿಸಿಲ್ಲ ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿ, ಗೌರವಿಸಬೇಕು ಎಂದರು.
ಮಧ್ಯಾಹ್ನದ ಬಿಸಿ ಊಟ ಪ್ರಾರಂಭಕ್ಕೆ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದ್ದೇನೆ ಕೇಂದ್ರದಿಂದ ಹಸಿರು ನಿಶಾನೆ ಬಂದಿಲ್ಲ. ಬಂದ ತಕ್ಷಣ ಬಿಸಿಯೂಟ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಮಾಲೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರೀಯಿಸಿದ ಅವರು,10 ದಿನಗಳ ಹಿಂದೆ ಪ್ರತಿ ದಿನ ವರದಿಯಾಗುತ್ತಿದ್ದ ಕರೊನಾ ಸೋಂಕಿನ ಸಂಖ್ಯೆ 350 ಕ್ಕೆ ಇಳಿದಿತ್ತು.ಈಗ 700 ಕ್ಕೆ ಏರಿಕೆಯಾಗಿರುವುದರಿಂದ ಪರಿಸ್ಥಿತಿ ಬದಲಾವಣೆ ಆಗಿದೆ. ಹಾಗಾಗಿ ತಕ್ಷಣಕ್ಕೆ ತೀರ್ಮಾನ ತೆಗೆದುಕೊಳ್ಳುವುದು ಕಷ್ಟ. ಆರೋಹ್ಯ ಇಲಾಖೆಯ ಸಲಹೆ ಪಡೆದು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ 1 ರಿಂದ 5 ತರಗತಿಗಳ ಪ್ರಾರಂಭಕ್ಕೆ ಒತ್ತಡ ಬರುತ್ತಿದ್ದರೂ ಕರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಆರೋಗ್ಯ ಇಲಾಖೆಯ ಸಲಹೆ ಸೂಚನೆ ಪಡೆದು ನಂತರ ತೀರ್ಮಾನ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು.
ವಿಜಯವಾಣಿ ಸುದ್ದಿಜಾಲ ಕೋಲಾರ