

ಬಾಗಲಕೋಟೆ: ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾವಳಿಗೆ ಜಿಲ್ಲಾಽಕಾರಿ ಸಂಗಪ್ಪ ಎಂ, ಹಾಗೂ ಜಿ.ಪಂ ಸಿಇಒ ಶಶಿಧರ ಕುರೇರ ಜಂಟಿಯಾಗಿ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಽಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಹಮ್ಮಿಕೊಂಡ ಕ್ರಿಕೇಟ್ ಪಂದ್ಯಾವಳಿಗೆ ಚಾಲನೆ ನೀಡಿದ ಮಾತನಾಡಿದ ಜಿಲ್ಲಾಽಕಾರಿ ಸಂಗಪ್ಪ ಎಂ., ಒತ್ತಡದ ಬದುಕಿನಿಂದ ಹೊರಬರಲು ಕ್ರೀಡಾ ಚಟುವಟಿಕೆಗಳು ಅವಶ್ಯವಾಗಿವೆ. ಇಂತಹ ಚಟುವಟಿಕೆಗಳಲ್ಲಿ ಎಲ್ಲರೂ ಭಾಗವಹಿಸಲು ಮುಂದಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಚಿಕಿತ್ಸೆ ಕ್ಷಯ ರೋಗಿಗಳಿಗೆ ಸಾಂಕೇತಿಕವಾಗಿ ೧೦ ಜನರಿಗೆ ಪೌಷ್ಠಿಕ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಽಕಾರಿ ಡಾ.ಸುವರ್ಣ ಕುಲಕರ್ಣಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಆರೋಗ್ಯ ಇಲಾಖೆಯ ಜಗನ್ನಾಥ ದೇಶಪಾಂಡೆ, ರಾಘು ಕುಲಕರ್ಣಿ, ರಾಜಶೇಖರ ಅಂಬಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.