ಆರೋಗ್ಯ ಯೋಜನೆಗಳಿಗೆ ಜಾನಪದ ಕಲಾತಂಡಗಳಿಂದ ಅರಿವು

07_HSN_03
Published on

ಹಾಸನ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ತೀವ್ರ ಪ್ರಚಾರಾಂದೋಲನವನ್ನು ನೀಡಲಾಗುತ್ತಿದೆ. ತಾಯಿ- ಮಗುವಿನ ಆರೋಗ್ಯ ಮತ್ತು ಭ್ರೂಣಲಿಂಗ ಪತ್ತೆ ನಿಷೇಧ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ಬಗ್ಗೆ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್. ಅನಿಲ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮ, ಯೋಜನೆಗಳನ್ನು ಕುರಿತು ಜಾನಪದ ಕಲಾತಂಡಗಳಿಂದ ಹಮ್ಮಿಕೊಂಡಿದ್ದ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಂಟು ಕಲಾತಂಡಗಳಿಂದ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರವನ್ನು ಯಶಸ್ವಿಗೊಳಿಬೇಕಾಗಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಬಿ. ಶಿವಶಂಕರ್, ಡಾ. ನಾಗಪ್ಪ, ಡಾ.ವಿಜಯ್ ಗೊರೂರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕೆ.ಕೆ. ಮಂಜುಳಾ ಹಾಗೂ ಎಲ್ಲ ತಾಲ್ಲೂಕಿನ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net