ಆರೋಗ್ಯ ವಿಜ್ಞಾನ ಕಟ್ಟಡಕ್ಕೆ ಶಂಕುಸ್ಥಾಪನೆ

appa
Published on

ಕಲಬುರಗಿ: ನಗರದ ಹೊರವಲಯದ ಶರಣಸಿರಸಗಿ ಗ್ರಾಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರಸ್ತಾವಿತ ವೈದ್ಯಕೀಯ ಕಾಲೇಜು ಸೇರಿ ಆರೋಗ್ಯ ವಿಜ್ಞಾನ ಸಂಬAಧಿತ ಕಾಲೇಜುಗಳ ನಿರ್ಮಾಣ ಕಾಮಗಾರಿಗೆ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ, ಶರಣಬಸವೇಶ್ವರ ಸಂಸ್ಥಾನದ ೮ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

೬೧ ಎಕರೆ ಪ್ರದೇಶದಲ್ಲಿ ತಲೆ ಎತ್ತಲಿರುವ ನಾನಾ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಡಾ.ಅಪ್ಪಾಜಿ, ಆಯುರ್ವೇದ, ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಕಾಲೇಜುಗಳ ನಿರ್ಮಾಣ ಕಾರ್ಯ ತಕ್ಷಣ ಪ್ರಾರಂಭಿಸಲಾಗುವುದು. ನಂತರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದಿಗೆ ಉz್ದೆÃಶಿತ ವೈದ್ಯಕೀಯ ಕಾಲೇಜು ಹಂತ, ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಶರಣಬಸವ ವಿವಿ ಕುಲಪತಿ ಡಾ.ನಿರಂಜನ್ ನಿಷ್ಠಿ ಮಾತನಾಡಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದಿಗೆ ವಿವಿಧ ಆರೋಗ್ಯ ಸಂಬAಧಿ ಕಾಲೇಜು ಕಟ್ಟಡಗಳ ನಿರ್ಮಾಣದಿಂದ ಈ ಪ್ರದೇಶದ ಜನರ ಆರೋಗ್ಯದ ಅಗತ್ಯತೆ ಪೂರೈಸುವಲ್ಲಿ ಪ್ರಯೋಜನಕಾರಿಯಾಗಲಿದೆ ಎಂದು ಹೇಳಿದರು.

ವಿವಿ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಮಾತನಾಡಿ, ಲಭ್ಯವಿರುವ ಜಾಗದಲ್ಲಿ ೩೫ ಎಕರೆ ಭೂಮಿ ಆಸ್ಪತ್ರೆ ಸೇರಿ ಇತರೆ ಪ್ಯಾರಾ ಮೆಡಿಕಲ್ ಕಾಲೇಜು ಮತ್ತು ಪೂರ್ಣ ಪ್ರಮಾಣದ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದಿಗೆ ಆಯುರ್ವೇದ ಕಾಲೇಜು ನಿರ್ಮಾಣಕ್ಕೆ ಬಳಸಲಾಗುವುದು. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ, ಸಿಬ್ಬಂದಿ ಕ್ವಾರ್ಟರ್ಸ್, ಅತಿಥಿ ಗೃಹ, ಕ್ರೀಡಾಂಗಣ ಮತ್ತು ಇತರೆ ಸೌಲಭ್ಯಗಳಿರಲಿವೆ. ಉಳಿದ ಜಾಗದಲ್ಲಿ ವಿಶ್ವವಿದ್ಯಾಲಯದ ಭವಿಷ್ಯದ ಅವಶ್ಯಕತೆ ಪೂರೈಸಲು ಕಟ್ಟಡಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಮಾತನಾಡಿದರು.ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪೂಜಾ ವಿಧಿ ವಿಧಾನಗಳು ನೆರವೇರಿಸಿದರು. ವಿವಿ ಸಮಕುಲಪತಿ ಪ್ರೊ.ವಿ.ಡಿ.ಮೈತ್ರಿ, ಡೀನ್ ಡಾ.ಲಕ್ಷಿö್ಮÃ ಪಾಟೀಲ್ ಮಾಕಾ, ಕುಲಸಚಿವ(ಮೌಲ್ಯಮಾಪನ)ಡಾ.ಬಸವರಾಜ ಮಠಪತಿ ಇತರ‍್ದಿರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net