ಆರೋಗ್ಯ ವಿಮೆ ಕಲ್ಪಿಸುವಂತೆ ಮನವಿ ಸಲ್ಲಿಕೆ

17rajesh11
Published on

ಚಾಮರಾಜನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಇಎಸ್‌ಐ-ಪಿಎ್ ಪಡೆಯದ ನರೇಗಾ ಸಿಬ್ಬಂದಿಗಳಿಗೆ ಸಾಮೂಹಿಕ ಆರೋಗ್ಯ ವಿಮೆ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ಬೇರ್ ್ಯೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಸಿಇಓ ಮೋನಾರೋತ್ ಅವರಿಗೆ ಮನವಿ ಸಲ್ಲಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 8 ವರ್ಷಗಳಿಂದ ಬೇರ್ ್ಯೂಟ್ ಟೆಕ್ನಿಷಿಯನ್ಸ್‌ಗಳು ಕಾರ್ಯನಿರ್ವಹಿಸುತ್ತಿದ್ದೇವೆ. ಮೊದಲು 5-8 ಪಂಚಾಯಿತಿಗಳಲ್ಲಿ ಹಾಗೂ ಪ್ರಸ್ತುತ 3-4 ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ನಾವು ಪ್ರತಿನಿತ್ಯ 50-100 ಕಿ.ಮೀ ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುತ್ತೇವೆ. ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿದ್ದು, ಬಿಎ್ಟಿ ಸಿಬ್ಬಂದಿಗಳಿಗೆ ಸಾಮೂಹಿಕ ಆರೋಗ್ಯ ವಿಮೆ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರಸ್ತುತ ಸಂದರ್ಭದಲ್ಲಿ ಬದಲಾಗುತ್ತಿರುವ ವಾತಾರಣದಲ್ಲಿ ನಿತ್ಯವೂ ಒಂದಿಲ್ಲೊಂದು ಆರೋಗ್ಯ ಸಮಸ್ಯೆಗಳು ಕಾಡುತ್ತಿದೆ. ಈ ನಿಟ್ಟಿನಲ್ಲಿ ಬಿಎ್ಟಿ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ ಅಗತ್ಯವಾಗಿದೆ. ಆಗಾಗಿ ಬಿಎ್ಟಿ ಸಿಬ್ಬಂದಿಗಳು ಮತ್ತು ಅವರ ಕುಟುಂಬದವರಿಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೇರ್ ್ಯೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಮಲ್ಲರಾಜು, ಕಾರ್ಯದರ್ಶಿ ಆರ್.ಮಹೇಶ್, ಗೌರವಾಧ್ಯಕ್ಷ ರಾಜೇಶ್, ಖಜಾಂಚಿ ಎಚ್.ಎಂ.ಮಹೇಶ್, ಉಪಾಧ್ಯಕ್ಷ ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ಕೃಷ್ಣ ಹಾಗೂ ಸದಸ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net