ಆರೋಗ್ಯ ವೃದ್ಧಿಗೆ ಕ್ರೀಡೆ ಅತ್ಯವಶ್ಯ

Sports are essential for health promotion
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆವರಣದಲ್ಲಿ ಡಿಸಿಸಿ ಬ್ಯಾಂಕ್‌ನ ನೌಕರರ ಗಜಾನನ ಉತ್ಸವ ಮಂಡಳಿಯಿಂದ ಆಯೋಜಿಸಿದ್ದ ಕ್ರೀಡಾಕೂಟವನ್ನು ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಉದ್ಘಾಟಿಸಿದರು. ಹನುಮಂತರಾಯಗೌಡ ಪಾಟೀಲ, ಎಸ್.ಡಿ. ಬಿರಾದಾರ, ಸುರೇಶಗೌಡ ಪಾಟೀಲ ಇತರರಿದ್ದರು.
Published on

ಬಸವನಬಾಗೇವಾಡಿ: ಪ್ರತಿಯೊಬ್ಬ ಮನುಷ್ಯನ ಆರೋಗ್ಯ ವೃದ್ಧಿಯಾಗಬೇಕಾದರೆ ಕ್ರೀಡಾ ಚಟುವಟಿಕೆಗಳು ಅತಿ ಅವಶ್ಯ ಎಂದು ವಿಜಯಪುರರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆವರಣದಲ್ಲಿ ಡಿಸಿಸಿ ಬ್ಯಾಂಕ್‌ನ ನೌಕರರ ಗಜಾನನ ಉತ್ಸವ ಮಂಡಳಿಯಿಂದ ಬ್ಯಾಂಕಿನ ನೌಕರರಿಗಾಗಿ ಭಾನುವಾರ ಹಮ್ಮಿಕೊಂಡಿದ್ದ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನಮ್ಮ ಅನೇಕ ದಿನನಿತ್ಯದ ಕೆಲಸ ಕಾರ್ಯಗಳ ಒತ್ತಡದಲ್ಲಿ ಆರೋಗ್ಯದತ್ತ ಗಮನ ಹರಿಸುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯ ಎಂದು ಹೇಳಿದರು.

ಗ್ರಾಮೀಣ ಭಾಗದ ಅನೇಕ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಖೋ ಖೋ, ಕಬಡ್ಡಿ, ಓಟದ ಸ್ಪರ್ಧೆ ಸೇರಿ ಹಲವಾರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಸಾಧ್ಯವಿದೆ. ಟಿವಿ ಮೊಬೈಲ್, ಕಂಪ್ಯೂಟರ್ ಸೇರಿ ಹಲವಾರು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮಾಡಿಕೊಳ್ಳಬೇಕು. ಆದರೆ ಅವುಗಳಿಗೆ ಅಂಟಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳಬಾರದು ಎಂದರು.

ಉತ್ತಮ ಆಹಾರ ಸೇವನೆ ಮಾಡುವುದರ ಜತೆಗೆ ಸ್ವಲ್ಪ ಕಾಲವಾದರೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಬ್ಯಾಂಕ್ ನಿರ್ದೇಶಕ ಹನುಮಂತರಾಯಗೌಡ ಪಾಟೀಲ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಡಿ. ಬಿರಾದಾರ, ಸುರೇಶಗೌಡ ಪಾಟೀಲ, ಸತೀಶ ಪಾಟೀಲ, ಆರ್.ಎಂ. ಪಾಟೀಲ, ಎಂ.ಜಿ. ಬಿರಾದಾರ, ಎಚ್.ಎಂ. ಹತ್ತೊರಕರ, ಪಿ.ವೈ. ಡೆಂಗಿ, ಬಿ.ಆರ್. ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net